AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಮೂವರ ಬಂಧನ

16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಮೂವರ ಬಂಧನ

ಶಿವಕುಮಾರ್ ಪತ್ತಾರ್
| Edited By: |

Updated on: Nov 18, 2026 | 6:28 AM

Share

ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದಲ್ಲಿ ಪ್ರವಾಸಿಗರಿಗೆ ಮಾರಾಟ ಮಾಡಲು ಹಿಮಾಚಲ ಪ್ರದೇಶದಿಂದ ತಂದಿದ್ದ 16 ಲಕ್ಷ ರೂ. ಮೌಲ್ಯದ 753 ಗ್ರಾಂ ಚರಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚರಸ್ ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಸಂಬಂಧ ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ, ನವೆಂಬರ್​​ 18: ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಮನೆಯಲ್ಲಿ 16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್​​ನ ಪೊಲೀಸರು ಜಪ್ತಿ ಮಾಡಿದ್ದಾರೆ. ರಾಜೇಶ್ ಶರ್ಮಾ ಎಂಬಾತ ಪ್ರವಾಸಿಗರಿಗೆ ಮಾರಾಟ ಮಾಡಲೆಂದು ಹಿಮಾಚಲ ಪ್ರದೇಶದಿಂದ ಚರಸ್ ತಂದಿದ್ದ. ಇದನ್ನು ಸಣಾಪುರ, ಆನೆಗೊಂದಿ, ಬಸಾಪುರಕ್ಕೆ ಬರುವ ಪ್ರವಾಸಿಗರಿಗೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣ ಸಂಬಂಧ ಆನೆಗೊಂದಿ, ಬಸಾಪುರದ ರೆಸಾರ್ಟ್​ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ರಾಜೇಶ್ ಶರ್ಮಾ, ಹನುಮನಹಳ್ಳಿಯ ಮಂಜುನಾಥ ಮತ್ತು ರಜಿನಿಕಾಂತ್ ಎಂಬವರನ್ನು ಬಂಧಿಸಲಾಗಿದೆ. 88 ಚಿಕ್ಕ ಪ್ಯಾಕೆಟ್​ನಲ್ಲಿದ್ದ 753 ಗ್ರಾಂ ಚರಸ್​​ನ ಪೊಲೀಸರು ವಶಕ್ಕೆ ಪಡೆದಿದ್ದು, ಚರಸ್ ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More