ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ!
ಕೊಪ್ಪಳದ ದದೇಗಲ್ ಬಳಿ ಅಕ್ರಮವಾಗಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ಗ್ರಾಮೀಣ ಪೊಲೀಸರು ಭಾನುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸರಣಿಯಾಗಿ ನಡೆಯುತ್ತಿರುವ ಅಕ್ಕಿ ದಂಧೆ ತಡೆಯಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ ಇಂಥ ಕೃತ್ಯಗಳು ನಡೆಯುತ್ತಲೇ ಇವೆ. ಸದ್ಯ ಪೊಲೀಸರು ಅಕ್ಕಿ ವಶಪಡಿಸಿಕೊಂಡಿರುವ ವಿಡಿಯೋ ಇಲ್ಲಿದೆ.
ಕೊಪ್ಪಳ, ಏಪ್ರಿಲ್ 27: ಜಿಲ್ಲೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ಇದೀಗ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖದೀಮರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ತಡರಾತ್ರಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕೊಪ್ಪಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಅಕ್ಕಿ ಸಂಗ್ರಹವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪಡಿತರ ಅಕ್ಕಿ ದಂಧೆ ಹೆಚ್ಚಾಗುತ್ತಿದ್ದು, ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 27, 2026 10:31 AM
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
