ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ!

Edited By:

Updated on: Apr 27, 2026 | 10:32 AM

ಕೊಪ್ಪಳದ ದದೇಗಲ್ ಬಳಿ ಅಕ್ರಮವಾಗಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ಗ್ರಾಮೀಣ ಪೊಲೀಸರು ಭಾನುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸರಣಿಯಾಗಿ ನಡೆಯುತ್ತಿರುವ ಅಕ್ಕಿ ದಂಧೆ ತಡೆಯಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ ಇಂಥ ಕೃತ್ಯಗಳು ನಡೆಯುತ್ತಲೇ ಇವೆ. ಸದ್ಯ ಪೊಲೀಸರು ಅಕ್ಕಿ ವಶಪಡಿಸಿಕೊಂಡಿರುವ ವಿಡಿಯೋ ಇಲ್ಲಿದೆ.

ಕೊಪ್ಪಳ, ಏಪ್ರಿಲ್ 27: ಜಿಲ್ಲೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ಇದೀಗ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖದೀಮರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ತಡರಾತ್ರಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕೊಪ್ಪಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಅಕ್ಕಿ ಸಂಗ್ರಹವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪಡಿತರ ಅಕ್ಕಿ ದಂಧೆ ಹೆಚ್ಚಾಗುತ್ತಿದ್ದು, ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 27, 2026 10:31 AM
Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More