ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೊಪ್ಪಳ, ಮೇ 23: ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.
ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೊಳಗಾದ ವಾಹನವು ಹೈದರಾಬಾದ್‌ನಿಂದ ಗೋವಾ ಕಡೆಗೆ ಪ್ರವಾಸ ಹೊರಟಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us