Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ಭರ್ಜರಿ ಡ್ಯಾನ್ಸ್, ವಿಡಿಯೋ ನೋಡಿ

ಕೊಪ್ಪಳ: ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ಭರ್ಜರಿ ಡ್ಯಾನ್ಸ್, ವಿಡಿಯೋ ನೋಡಿ

ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಸಾಧು ಶ್ರೀನಾಥ್​

Updated on:Nov 25, 2023 | 4:46 PM

Koppal SP Dance: ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಅವರು ಇಂದು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Koppal SP) ಯಶೋದಾ ವಂಟಗೋಡಿ ಅವರು ಇಂದು ಭರ್ಜರಿ ಡ್ಯಾನ್ಸ್ (Dance) ಮಾಡಿದ್ದಾರೆ. ಹೌದು ಕೊಪ್ಪಳ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ, ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ (Police sports meet) ಚಾಲನೆ ನೀಡಿದ ಎಸ್ಪಿ ಯಶೋದಾ ವಂಟಗೋಡಿ, ನಂತರ ತಮ್ಮ ಸಿಬ್ಬಂದಿ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಕೊಪ್ಪಳ ಜಿಲ್ಲಾ ಪೊಲೀಸ್ ಕ್ರೀಡಾಕೂಟ ನಡೆಯಲಿದೆ.

ಪೊಲೀಸರು ಪ್ರತಿನಿತ್ಯ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಅಪರಾಧ ಕೃತ್ಯಗಳನ್ನು ತಡೆಯುವದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಹಗಲಿರುಳು ಶ್ರಮಿಸುತ್ತಾರೆ. ಆದ್ರೆ ಅವರಿಗೆ ಹೆಚ್ಚು ಉಲ್ಲಾಸ ನೀಡುವುದು ಪ್ರತಿ ವರ್ಷ ನಡೆಯುವ ವಾರ್ಷಿಕ ಕ್ರೀಡಾಕೂಟ.

ವಾರಾಂತ್ಯ ಇಂದು ಶನಿವಾರ ಕೊಪ್ಪಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಆರಂಭವಾಗಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಎರಡು ದಿನಗಳ ಕಾಲ ಪೊಲೀಸ್ ಕ್ರೀಡಾಕೂಟ ನಡೆಯಲಿದೆ. ಇಂದು ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನಂತರ ಕೊಪ್ಪಳ ಎಸ್ಪಿ ಯಶೋದಾ ವಂಟಗೋಡಿ ತಮ್ಮ ಸಿಬ್ಬಂದಿ ಜೊತೆ ಭರ್ಜರಿ ಡ್ಯಾನ್ಸ್ ಮಾಡೋ ಮೂಲಕ ಸಿಬ್ಬಂದಿಗೆ ಹುರುಪು ತುಂಬುವ ಕೆಲಸ ಮಾಡಿದ್ರು.

 
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 25, 2023 04:20 PM