ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ
ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿಹೋದ ನಂತರ, 52 ಕೋಟಿ ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ. ಆದರೆ, ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ಎಂದು ಘೋಷಿಸಿದೆ.
ಕೊಪ್ಪಳ, ಡಿಸೆಂಬರ್ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್‌ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್‌ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್ಗಳನ್ನ ತೆರವು ಮಾಡಿದ್ದು, ಹೊಸ ಗೇಟ್ಗಳನ್ನ ಅಳವಡಿಸಲು ಸಿದ್ದತೆ ನಡೆಸಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಗೇಟ್ ಗಳನ್ನ ತೆರವು ಮಾಡಿ, ಡಿಸೆಂಬರ್ 24ರಿಂದ ಹೊಸ ಗೇಟ್ ಅಳವಡಿಕೆ ಕಾರ್ಯ ಶುರುವಾಗಲಿದೆ. ಮಳೆಗಾಲ ಆರಂಭಕ್ಕೂ ಮುನ್ನ ಗೇಟ್ ಅಳವಡಿಕೆ ಮಾಡಬೇಕು ಎನ್ನುವುದು ಸರ್ಕಾರದ ನಿರ್ಧಾರವಾಗಿದೆ. ಜೂನ್ ವೇಳೆಗೆ ಹೊಸ ಗೇಟ್‌ಗಳು ಅಳವಡಿಕೆಯಾಗಲಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
