ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ

Edited By:

Updated on: Dec 19, 2025 | 10:49 PM

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿಹೋದ ನಂತರ, 52 ಕೋಟಿ ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ. ಆದರೆ, ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ಎಂದು ಘೋಷಿಸಿದೆ.

ಕೊಪ್ಪಳ, ಡಿಸೆಂಬರ್​ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್​​ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್​​ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್​ಗಳನ್ನ ತೆರವು ಮಾಡಿದ್ದು, ಹೊಸ ಗೇಟ್​ಗಳನ್ನ ಅಳವಡಿಸಲು ಸಿದ್ದತೆ ನಡೆಸಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಗೇಟ್ ಗಳನ್ನ ತೆರವು ಮಾಡಿ, ಡಿಸೆಂಬರ್ 24ರಿಂದ ಹೊಸ ಗೇಟ್ ಅಳವಡಿಕೆ ಕಾರ್ಯ ಶುರುವಾಗಲಿದೆ. ಮಳೆಗಾಲ ಆರಂಭಕ್ಕೂ ಮುನ್ನ ಗೇಟ್ ಅಳವಡಿಕೆ ಮಾಡಬೇಕು ಎನ್ನುವುದು ಸರ್ಕಾರದ ನಿರ್ಧಾರವಾಗಿದೆ. ಜೂನ್ ವೇಳೆಗೆ ಹೊಸ ಗೇಟ್‌ಗಳು ಅಳವಡಿಕೆಯಾಗಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Dec 19, 2025 10:48 PM