Koppal Viral Fever: ವೈರಲ್ ಫೀವರ್​ಗೆ ತತ್ತರಿಸಿದ ನೆರೆಬೆಂಚಿ ಗ್ರಾಮ; ಜ್ವರ, ಮೈಕೈ ನೋವಿನಿಂದ ಜನರ ನರಳಾಟ

Edited By:

Updated on: Feb 08, 2024 | 1:18 PM

ಕೊಪ್ಪಳ ಜಿಲ್ಲೆಯಲ್ಲಿ ವೈರಲ್ ಫೀವರ್ ವ್ಯಾಪಕವಾಗಿ ಹರಡುತ್ತಿದೆ. ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮವೇ ಜ್ವರದಿಂದ ತತ್ತರಿಸುತ್ತಿದೆ. ಜನರು ಜ್ವರ ಮತ್ತು ಮೈಕೈ ನೋವಿನಿಂದ ನರಳಾಡುತ್ತಿದ್ದಾರೆ. ಗ್ರಾಮಕ್ಕೆ ಕುಷ್ಟಗಿ ತಹಶೀಲ್ದಾರ್ ರವಿಕುಮಾರ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ.

ಕೊಪ್ಪಳ, ಫೆ.8: ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ (Viral Fever) ವ್ಯಾಪಕವಾಗಿ ಹರಡಿದ್ದು, ಜ್ವರ ಮತ್ತು ಮೈಕೈ ನೋವಿನಿಂದ ಜನರು ನರಳಾಡುತ್ತಿದ್ದಾರೆ. ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿಕುಮಾರ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲಾ ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುತ್ತೇವೆ ಎಂದು ತಹಶೀಲ್ದಾರ್ ಹೇಳಿದ್ದಾರೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್​ತಂಗಡಿ, ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮಕ್ಕೆ ಭೇಟಿ ಕೊಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದ್ದೇನೆ. ರೋಗಿಗಳಿಗೆ ದೇವಸ್ಥಾನದಲ್ಲಿ ಚಿಕಿತ್ಸೆ ಕೊಡುತ್ತಿದ್ದರೆ ಅವರನ್ನ ತಾಲೂಕು ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಕೊಪ್ಪಳ: ಮಂಗನ ಕಾಯಿಲೆ ಬೆನ್ನಲ್ಲೇ ಎಂಟ್ರಿ ಕೊಟ್ಟ ಮಂಗನ ಬಾವು; ಮಕ್ಕಳು ಸೇರಿ ವಯಸ್ಕರು ಹೈರಾಣ

ರೋಗಿಗಳು ತಾಲೂಕು ಆಸ್ಪತ್ರೆಗೆ ಸ್ಥಳಾಂತರ

ಗ್ರಾಮದಲ್ಲಿ ಜ್ವರ ಮತ್ತು ಮೈಕೈ ನೋವು ಉಲ್ಬಣಗೊಂಡಿದ್ದು, ಜ್ವರದಿಂದ ಬಳಲುತ್ತಿದ್ದವರನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕಳೆದ ಮೂರು ದಿನಗಳಿಂದ ಗ್ರಾಮದ ದೇವಸ್ಥಾನದಲ್ಲಿಯೇ ರೋಗಿಗಿಗೆ ಚಿಕಿತ್ಸೆ ನೀಡುತ್ತಿದ್ದರು. ಟಿವಿ9 ವರದಿ ನಂತರ ಗ್ರಾಮಕ್ಕೆ ಆಗಮಿಸಿದ್ದ ಅಧಿಕಾರಿಗಳು, ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Feb 08, 2024 01:10 PM