ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ, ರಾತ್ರಿಯಿಡೀ ಕಾಯೋ ಸ್ಥಿತಿ
ಕೊಪ್ಪಳ ಜಿಲ್ಲೆಯ ಯರೇ ಹಂಚಿನಾಳ ಗ್ರಾಮವು ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಗ್ರಾಮದ ಕೆರೆ ಬಹುತೇಕ ಬರಿದಾಗಿದ್ದು, ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಅವಲಂಬಿತರಾಗಿದ್ದಾರೆ. ಶುದ್ಧ ನೀರಿಗಾಗಿ ಕ್ಯಾನ್‌ಗಳನ್ನು ಹಿಡಿದುಕೊಂಡು ಗಂಟೆಗಟ್ಟಲೆ ರಾತ್ರಿಯಿಡೀ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊಪ್ಪಳ, ಜೂನ್ 20: ಕೊಪ್ಪಳ ಜಿಲ್ಲೆಯ ಯರೇ ಹಂಚಿನಾಳ ಗ್ರಾಮವು ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಗ್ರಾಮಸ್ಥರ ದೈನಂದಿನ ಬದುಕಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಶುದ್ಧ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಕ್ಯಾನ್‌ಗಳನ್ನು ಹಿಡಿದುಕೊಂಡು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿನ ಕುಡಿಯುವ ನೀರಿನ ಘಟಕವೇ ಗ್ರಾಮಸ್ಥರ ಏಕೈಕ ಆಸರೆಯಾಗಿದೆ. ಹೀಗಾಗಿ, ಬಹುತೇಕ ಗ್ರಾಮಸ್ಥರಿಗೆ ಈ ಶುದ್ಧ ಕುಡಿಯುವ ನೀರಿನ ಘಟಕದ ಮುಂದೆ ಸರದಿ ಸಾಲಿನಲ್ಲಿ ನಿಲ್ಲುವುದು ದಿನಚರಿಯ ಭಾಗವಾಗಿದೆ.
ಗ್ರಾಮದ ಪ್ರಮುಖ ನೀರಿನ ಮೂಲವಾದ ಕೆರೆಯಲ್ಲಿ ನೀರು ಬಹುತೇಕ ಖಾಲಿಯಾಗಿದೆ. ನೀರಿನ ಕೊರತೆಯು ಈ ಭಾಗದ ಜನರ ಆರೋಗ್ಯ ಮತ್ತು ಜೀವನಶೈಲಿಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳು ಈ ಸಮಸ್ಯೆಯತ್ತ ಗಮನ ಹರಿಸಿ, ಯರೇ ಹಂಚಿನಾಳ ಗ್ರಾಮದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
