ಕೊಪ್ಪಳ: ಯಲಬುರ್ಗಾದಲ್ಲಿ ಮಹಿಳೆಗೆ ಮದ್ಯ ಸೇವನೆ ಮಾಡಿಸಿ ನಾಲ್ವರಿಂದ ಅತ್ಯಾಚಾರ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ಲೂರಿನಲ್ಲಿ 39 ವರ್ಷದ ಮಹಿಳೆಯ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಮದ್ಯ ಸೇವನೆ ಮಾಡಿಸಿ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕೊಪ್ಪಳ, ನವೆಂಬರ್ 17: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ಲೂರಿನಲ್ಲಿ 39 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ನಾಲ್ವರು ದುಷ್ಕರ್ಮಿಗಳು ಮಹಿಳೆಗೆ ಮದ್ಯ ಸೇವನೆ ಮಾಡಿಸಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಹೊಸಪೇಟೆ ಮೂಲದ ಮಹಿಳೆ ಪರಿಚಯಸ್ಥರಿಂದ ಹಣ ಪಡೆಯಲು ಕುಷ್ಟಗಿ ಪಟ್ಟಣಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಸಂಜೆ ಬೈಕ್‌ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪವಿದೆ.
ಘಟನೆಯಿಂದ ಅಸ್ವಸ್ಥಗೊಂಡ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಮಾಹಿತಿ ತಿಳಿದ ತಕ್ಷಣ ಡಿವೈಎಸ್ಪಿ ಮುತ್ತಣ್ಣ ಸವರಗೋಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
