ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ: ಬೃಹತ್ ಪ್ರತಿಭಟನೆ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜನರ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಕಾರ್ಖಾನೆಯನ್ನು ಸೀಜ್ ಮಾಡುವಂತೆ ರೈತರು, ಪರಿಸರ ಹೋರಾಟಗಾರರು ಹಾಗೂ ರಾಜಕೀಯ ಸಂಘಟನೆಗಳು ಒತ್ತಾಯಿಸಿವೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಪ್ರತಿಭಟನಾ ಱಲಿ ನಡೆದ ಪರಿಣಾಮ, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನೂ ಕೂಗಿದ್ದಾರೆ.
ಕೊಪ್ಪಳ, ಜುಲೈ 21: ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಪರಿಸರ ಹೋರಾಟಗಾರರು ಮತ್ತು ವಿವಿಧ ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿವೆ. ಬಲ್ಡೋಟಾ ಕಾರ್ಖಾನೆ ಎದುರು ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 63ರಲ್ಲಿಯೇ ರೈತರು ಕುರ್ಚಿಗಳನ್ನು ಹಾಕಿದ ಪರಿಣಾಮ, ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಹೆದ್ದಾರಿಯಲ್ಲಿ ಚೇರ್ಗಳನ್ನು ಹಾಕದಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದರೂ ಹೋರಾಟಗಾರರು ಮಾತ್ರ ಡೋಂಟ್ಕೇರ್ ಎಂದಿದ್ದಾರೆ. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
