ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ: ಬೃಹತ್​​ ಪ್ರತಿಭಟನೆ

Edited By:

Updated on: Jul 21, 2026 | 2:24 PM

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜನರ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಕಾರ್ಖಾನೆಯನ್ನು ಸೀಜ್ ಮಾಡುವಂತೆ ರೈತರು, ಪರಿಸರ ಹೋರಾಟಗಾರರು ಹಾಗೂ ರಾಜಕೀಯ ಸಂಘಟನೆಗಳು ಒತ್ತಾಯಿಸಿವೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಪ್ರತಿಭಟನಾ ಱಲಿ ನಡೆದ ಪರಿಣಾಮ, ಕೆಲ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನೂ ಕೂಗಿದ್ದಾರೆ.

ಕೊಪ್ಪಳ, ಜುಲೈ 21: ಬಲ್ಡೋಟಾ ಕಾರ್ಖಾನೆಯ ವಿರುದ್ಧ ರೈತರು, ಪರಿಸರ ಹೋರಾಟಗಾರರು ಮತ್ತು ವಿವಿಧ ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿವೆ. ಬಲ್ಡೋಟಾ ಕಾರ್ಖಾನೆ ಎದುರು ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 63ರಲ್ಲಿಯೇ ರೈತರು ಕುರ್ಚಿಗಳನ್ನು ಹಾಕಿದ ಪರಿಣಾಮ, ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ. ಹೆದ್ದಾರಿಯಲ್ಲಿ ಚೇರ್​​ಗಳನ್ನು ಹಾಕದಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದರೂ ಹೋರಾಟಗಾರರು ಮಾತ್ರ ಡೋಂಟ್​​ಕೇರ್​​ ಎಂದಿದ್ದಾರೆ. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More