ಶಿಷ್ಟಾಚಾರ ಉಲ್ಲಂಘನೆ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ವಾಗ್ವಾದ
ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಶಿಷ್ಟಾಚಾರ ಪಾಲಿಸದ ಕಾರಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಎದುರೇ ಸಚಿವ ಶಿವರಾಜ್ ತಂಗಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟಿಸಿದ್ದಾರೆ.
ಕೊಪ್ಪಳ, ಜನವರಿ 05: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವ ಶಿವರಾಜ್ ತಂಗಡಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರುಗಳನ್ನು ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರೆ, ಶಿವರಾಜ್ ತಂಗಡಗಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತದೆ ಎಂದು ಹೇಳಿದ ತಂಗಡಗಿ, ರಾಜ್ಯಕ್ಕೆ ಅವಮಾನ ಮಾಡಬೇಡಿ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
