ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಕೊಪ್ಪಳದ ಗವಿಮಠವು ಎಲ್‌ಪಿಜಿ ಬಿಕ್ಕಟ್ಟಿನ ನಡುವೆಯೂ ರಾಜ್ಯಕ್ಕೆ ಮಾದರಿಯಾಗಿದೆ. ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸುವುದರಿಂದ, ಮಠದ ಅನ್ನಪ್ರಸಾದ ಸೇವೆಗೆ ಯಾವುದೇ ಅಡ್ಡಿಯಾಗಿಲ್ಲ. ಪ್ರತೀ ತಿಂಗಳು 10-12 ಟ್ರ್ಯಾಕ್ಟರ್ ಸೌದೆಯನ್ನು ಬಳಸಿ, ಉಪಾಹಾರ, ಊಟ ಸಿದ್ಧಪಡಿಸಲಾಗುತ್ತಿದೆ. ಇದರಿಂದ ಭಕ್ತರಿಗೆ ನಿತ್ಯ ಅನ್ನಪ್ರಸಾದ ದೊರೆಯುತ್ತಿದೆ.
ಕೊಪ್ಪಳ, ಮಾರ್ಚ್ 15: ಎಲ್‌ಪಿಜಿ ಬಿಕ್ಕಟ್ಟು ಇಡೀ ರಾಜ್ಯವನ್ನು ಕಾಡುತ್ತಿರುವ ಮಧ್ಯೆ ಕೊಪ್ಪಳದ ಗವಿಮಠ ಒಂದು ವಿಶಿಷ್ಟ ಪರಿಹಾರದೊಂದಿಗೆ ಮಾದರಿಯಾಗಿ ನಿಂತಿದೆ. ಗವಿಮಠದಲ್ಲಿ ಎಂದಿನಂತೆ ಅನ್ನಪ್ರಸಾದ ಸೇವೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಇಲ್ಲಿ ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸಲಾಗುತ್ತದೆ. ಪ್ರತಿದಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟವನ್ನು ಸೌದೆ ಒಲೆಯಲ್ಲಿಯೇ ಸಿದ್ಧಪಡಿಸಲಾಗುತ್ತದೆ. ಮಠದಲ್ಲಿ ಪ್ರತಿ ತಿಂಗಳು ಸುಮಾರು 10 ರಿಂದ 12 ಟ್ರ್ಯಾಕ್ಟರ್ ಸೌದೆಯನ್ನು ಅಡುಗೆಗಾಗಿ ಬಳಸಲಾಗುತ್ತದೆ. ಇದರಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಅಥವಾ ಬೆಲೆ ಏರಿಕೆ ಮಠದ ದಾಸೋಹದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಕ್ತರಿಗೆ ನಿತ್ಯ ಅನ್ನಪ್ರಸಾದ ಸೇವೆ ಲಭ್ಯವಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
