ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?

Edited By:

Updated on: Mar 15, 2026 | 4:55 PM

ಕೊಪ್ಪಳದ ಗವಿಮಠವು ಎಲ್‌ಪಿಜಿ ಬಿಕ್ಕಟ್ಟಿನ ನಡುವೆಯೂ ರಾಜ್ಯಕ್ಕೆ ಮಾದರಿಯಾಗಿದೆ. ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸುವುದರಿಂದ, ಮಠದ ಅನ್ನಪ್ರಸಾದ ಸೇವೆಗೆ ಯಾವುದೇ ಅಡ್ಡಿಯಾಗಿಲ್ಲ. ಪ್ರತೀ ತಿಂಗಳು 10-12 ಟ್ರ್ಯಾಕ್ಟರ್ ಸೌದೆಯನ್ನು ಬಳಸಿ, ಉಪಾಹಾರ, ಊಟ ಸಿದ್ಧಪಡಿಸಲಾಗುತ್ತಿದೆ. ಇದರಿಂದ ಭಕ್ತರಿಗೆ ನಿತ್ಯ ಅನ್ನಪ್ರಸಾದ ದೊರೆಯುತ್ತಿದೆ.

ಕೊಪ್ಪಳ, ಮಾರ್ಚ್​​ 15: ಎಲ್‌ಪಿಜಿ ಬಿಕ್ಕಟ್ಟು ಇಡೀ ರಾಜ್ಯವನ್ನು ಕಾಡುತ್ತಿರುವ ಮಧ್ಯೆ ಕೊಪ್ಪಳದ ಗವಿಮಠ ಒಂದು ವಿಶಿಷ್ಟ ಪರಿಹಾರದೊಂದಿಗೆ ಮಾದರಿಯಾಗಿ ನಿಂತಿದೆ. ಗವಿಮಠದಲ್ಲಿ ಎಂದಿನಂತೆ ಅನ್ನಪ್ರಸಾದ ಸೇವೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಇಲ್ಲಿ ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸಲಾಗುತ್ತದೆ. ಪ್ರತಿದಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟವನ್ನು ಸೌದೆ ಒಲೆಯಲ್ಲಿಯೇ ಸಿದ್ಧಪಡಿಸಲಾಗುತ್ತದೆ. ಮಠದಲ್ಲಿ ಪ್ರತಿ ತಿಂಗಳು ಸುಮಾರು 10 ರಿಂದ 12 ಟ್ರ್ಯಾಕ್ಟರ್ ಸೌದೆಯನ್ನು ಅಡುಗೆಗಾಗಿ ಬಳಸಲಾಗುತ್ತದೆ. ಇದರಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಅಥವಾ ಬೆಲೆ ಏರಿಕೆ ಮಠದ ದಾಸೋಹದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಕ್ತರಿಗೆ ನಿತ್ಯ ಅನ್ನಪ್ರಸಾದ ಸೇವೆ ಲಭ್ಯವಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More