ಭಾರೀ ಮಳೆಗೆ ಭೋರ್ಗರೆಯುತ್ತಿದೆ ಕಪೀಲತೀರ್ಥ ಜಲಪಾತ

Edited By:

Updated on: Aug 06, 2025 | 11:26 AM

Koppal's Kapila Theertha Falls; ಕೊಪ್ಪಳದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕಪೀಲತೀರ್ಥ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಭೋರ್ಗರೆಯುವ ಜಲಪಾತ ವೀಕ್ಷಿಸಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಕರ್ನಾಟಕದ ಏಕೈಕ ಜಲಪಾತ ಆಗಿರುವ ಕಪೀಲತೀರ್ಥ ಫಾಲ್ಸ್​​​ನ ನಯನಮನೋಹರ ವಿಡಿಯೋ ಇಲ್ಲಿದೆ ನೋಡಿ.

ಕೊಪ್ಪಳ, ಆಗಸ್ಟ್ 6: ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಕಪೀಲತೀರ್ಥ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದೆ. ಕೊಪ್ಪಳದ ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದಲ್ಲಿರುವ ಕಪೀಲತೀರ್ಥ ಜಲಪಾತ ಕಲ್ಯಾಣ ಕರ್ನಾಟಕದ ಏಕೈಕ ಜಲಪಾತ ಎಂದು ಪ್ರಸಿದ್ಧಿ ಪಡೆದಿದೆ. ಸದ್ಯ ಭೋರ್ಗರೆದು ಧುಮ್ಮಿಕ್ಕುವ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 06, 2025 11:25 AM
Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More