‘ಕೋಟಿಗೊಬ್ಬ 3’ ನೋಡಲು ಸಾಲುಗಟ್ಟಿ ನಿಂತ ಫ್ಯಾನ್ಸ್​; ಸುದೀಪ್ ಕಟೌಟ್​ಗೆ ಹಾಲಿನ ಅಭಿಷೇಕ

‘ಕೋಟಿಗೊಬ್ಬ 3’ ಸಿನಿಮಾದ ಟಿಕೆಟ್​ ಪಡೆದು ಚಿತ್ರಮಂದಿರದ ಒಳಗೆ ಪ್ರವೇಶಿಸಲು ಜನರು ಉದ್ದ ಸಾಲಿನಲ್ಲಿ ನಿಂತು ಕಾದಿದ್ದಾರೆ. ಕಿಚ್ಚ ಸುದೀಪ್​ ಅವರ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಅಭಿಮಾನ ಮೆರೆದಿದ್ದಾರೆ.

ಕಿಚ್ಚ ಸುದೀಪ್​ ಅವರ ಅಭಿಮಾನಿ ಬಳಗ ದೊಡ್ಡದು. ತಮ್ಮ ನೆಚ್ಚಿನ ನಟನನ್ನು ದೊಡ್ಡ ಪರದೆ ಮೇಲೆ ನೋಡಲು ಎರಡು ವರ್ಷಗಳಿಂದ ಕಾದಿದ್ದ ಫ್ಯಾನ್ಸ್​ಗೆ ಇಂದು (ಅ.15) ನಿಜವಾದ ಹಬ್ಬ. ‘ಕೋಟಿಗೊಬ್ಬ 3’ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಮೊದಲ ದಿನ ಮೊದಲ ಶೋ ನೋಡಲು ಸಿನಿಪ್ರಿಯರು ಮುಗಿಬಿದ್ದಿದ್ದಾರೆ. ಟಿಕೆಟ್​ ಪಡೆದು ಚಿತ್ರಮಂದಿರದ ಒಳಗೆ ಪ್ರವೇಶಿಸಲು ಜನರು ಉದ್ದ ಸಾಲಿನಲ್ಲಿ ನಿಂತು ಕಾದಿದ್ದಾರೆ. ಕಿಚ್ಚ ಸುದೀಪ್​ ಅವರ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಅಭಿಮಾನ ಮೆರೆದಿದ್ದಾರೆ.

ಫಸ್ಟ್​ ಡೇ ಫಸ್ಟ್​ ಶೋಗೆ ಅಭಿಮಾನಿಗಳು ತೋರಿತ್ತಿರುವ ಪ್ರೀತಿ-ಪ್ರೋತ್ಸಾಹ ಕಂಡು ಸುದೀಪ್​ ಸಿಕ್ಕಾಪಟ್ಟೆ ಖುಷಿ ಆಗಿದ್ದಾರೆ. ಟ್ವೀಟ್​ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ 3 ಪ್ರದರ್ಶನ ಆರಂಭ ಆಗಿದೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಮುಂಜಾನೆಯ ಶೋಗಳ ಸಂಭ್ರಮದ ವಿಡಿಯೋಗಳನ್ನು ಅಪ್​ಲೋಡ್​ ಮಾಡಲಾಗುತ್ತಿದೆ. ಇಂಥ ಎಗ್ಸೈಟ್​ಮೆಂಟ್​​ ನೋಡಲು ಖುಷಿ ಆಗುತ್ತಿದೆ. ನೀವೆಲ್ಲರೂ ನಮಗೆ ನೀಡಿದ ಬೆಂಬಲಕ್ಕೆ ಬೆಲೆ ಕಟ್ಟಲಾಗದು’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

Kotigobba 3: ಕಿಚ್ಚನ ಒಂದೇ ಒಂದು ಟ್ವೀಟ್​ನಿಂದ​ ಹೆಚ್ಚಿತು ‘ಕೋಟಿಗೊಬ್ಬ 3’ ಕ್ರೇಜ್​; ಅಂಥ ವಿಶೇಷ ಇದರಲ್ಲೇನಿದೆ?

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

Click on your DTH Provider to Add TV9 Kannada