Congress Leaders Protest Live: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನೆ

Updated on: Sep 26, 2026 | 1:52 PM

ಚುನಾವಣಾ ಅಕ್ರಮ ಖಂಡಿಸಿ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ಬೃಹತ್​​ ಪ್ರತಿಭಟನೆ ನಡೆಸಲಾಗಿದೆ. ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರದಂತೆ ಹಲವು ಪ್ರಮುಖ ನಾಯಕರು ಹೋರಾಟದಲ್ಲಿ ಭಾಗಿಯಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 26: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಫ್ರೀಡಂಪಾರ್ಕ್​ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಡಿಕೆ ಶಿವಕುಮಾರ್​​, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ಸೇರಿ ಕಾಂಗ್ರೆಸ್​​ನ ಪ್ರಮುಖ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಚುನಾವಣಾ ಅಕ್ರಮ ವಿಚಾರ ಸಂಬಂಧ ಈಗಾಗಲೇ ದೇಶಾದ್ಯಂತ ಹೋರಾಟಕ್ಕೆ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 26, 2026 01:46 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More