ಸಂಪುಟ ಪುನಾರಚನೆ; ಕ್ಷೇತ್ರಗಳಲ್ಲಿ ಕೆಲಸ ಮಾಡುವ ರಿಸಲ್ಟ್ ಓರಿಯೆಂಟೆಡ್ ಮುಖಂಡರಿಗೆ ಅವಕಾಶ ಸಿಗಲಿದೆ: ಶಿವಕುಮಾರ್
ಕೆಲ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇವಲ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ ಶಾಸಕರಾಗಲೀ ಮಂತ್ರಿಗಳಾಗಲೀ ತನ್ನಲ್ಲಿಗೆ ಬಂದು ಚರ್ಚೆ ಮಾಡಿಲ್ಲ ಎಂದು ಶಿವಕುಮಾರ್ ಹೇಳಿದರು. ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಶಿವಕುಮಾರ್ ಅವರು ಪಕ್ಷದ ವರಿಷ್ಠರನ್ನೂ ಭೇಟಿಯಾಗಿ ಬಹಳಷ್ಟು ವಿಷಯಗಳನ್ನು ಚರ್ಚೆ ಮಾಡಲಿದ್ದಾರೆ.
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ದೆಹಲಿಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಪಕ್ಷ ಸಂಘಟನೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರುವ ಅವರು; ಕ್ಷೇತ್ರ, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಬಗೆಹರಿಸಿದವರಿಗೆ ಸಂಪುಟ ಪುನಾರಚನೆ ಸಮಯದಲ್ಲಿ ಆದ್ಯತೆ ನೀಡಲಾಗುವುದು, ಮಂತ್ರಿಯಾಗಿದ್ದರೂ ವ್ಯರ್ಥ ಕಾಲಹರಣ ಮಾಡಿರುವವರಿಗೆ ಪ್ರಾಶಸ್ತ್ಯ ನೀಡೋದು ಬೇಡ ಅಂತ ಹೈಕಮಾಂಡ್ನಿಂದ ಸೂಚನೆ ಬಂದಿದೆ ಎಂದು ಶಿವಕುಮಾರ್ ಹೇಳಿದರು. ಮಹಿಳಾ ಮೀಸಲಾತಿ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕಿದೆ ಒಟ್ಟಿನಲ್ಲಿ ರಿಸಲ್ಟ್ ಓರಿಯೆಂಟೆಡ್ ಮುಖಂಡರಿಗೆ ಮಣೆ ಹಾಕಲಾಗುವುದು ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಎಂ ಸೇರಿದಂತೆ ಎಲ್ಲ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು: ಡಿಕೆ ಶಿವಕುಮಾರ್