ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವಿನಯ್ ಕುಲಕರ್ಣಿ ಮೇಲೆ ಕಾಂಗ್ರೆಸ್ ನಾಯಕರ ಒತ್ತಡ?

|

Updated on: Mar 17, 2023 | 11:54 AM

ಕೆಪಿಸಿಸಿ ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕುಲಕರ್ಣಿಗೆ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಾಗಿದೆ ಮತ್ತು ಬಸವರಾಜ ಬೊಮ್ಮಾಯಿ, ಕುಲಕರ್ಣಿ ಇಬ್ಬರೂ ಲಿಂಗಾಯತರು.

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಆರೋಪದಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿರುವ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ವಿನಯ್ ಆರ್ ಕುಲಕರ್ಣಿಯವರನ್ನು (Vinay R Kulkarni) ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ಕ್ಷೇತ್ರವಾಗಿರುವ ಶಿಗ್ಗಾವಿ (Shiggaon) ಸ್ಪರ್ಧಿಸುವಂತೆ ಒತ್ತಡ ಹೇರಲಾಗುತ್ತಿದೆ. ಕೆಪಿಸಿಸಿ ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕುಲಕರ್ಣಿಗೆ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಾಗಿದೆ ಮತ್ತು ಬಸವರಾಜ ಬೊಮ್ಮಾಯಿ, ಕುಲಕರ್ಣಿ ಇಬ್ಬರೂ ಲಿಂಗಾಯತರು. ಕಾಂಗ್ರೆಸ್ ಆಂತರಿಕ ಸಮೀಕ್ಷೆಯ ಪ್ರಕಾರ ವಿನಯ್ ಕುಲಕರ್ಣಿ ಬೊಮ್ಮಾಯಿಗೆ ಪ್ರಬಲ ಸ್ಪರ್ಧಿಯಾಗಲಿದ್ದಾರೆ. ಅದರೆ ವಿನಯ್ ಗೆ ಶಿಗ್ಗಾವಿಯಿಂದ ಸ್ಪರ್ಧಿಸುವುದು ಬೇಕಿಲ್ಲ. ಇಂದು ಅವರು ಎಂಬಿ ಪಾಟೀಲ್ ಜೊತೆ ದೆಹಲಿಗೆ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Mar 17, 2023 11:54 AM