ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿಗರ ಟೀಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು
ಸಚಿವ ಸಂಪುಟ ವಿಸ್ತರಣೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ಸೂಟ್‌ಕೇಸ್, ಬ್ರೀಫ್‌ಕೇಸ್, ಆಪರೇಷನ್ ಕಮಲ ಮತ್ತು ಬಾಂಬೆ ಬಾಯ್ಸ್ ಕುರಿತು ಪ್ರಶ್ನಿಸಿದ ಹರಿಪ್ರಸಾದ್, ಬಿಜೆಪಿಗೆ ಸಾಮಾಜಿಕ ನ್ಯಾಯದ ಪರಿಜ್ಞಾನವಿಲ್ಲ. ರಾಜ್ಯದ ಬರಗಾಲ ಮತ್ತು ಕೇಂದ್ರದ ಅನುದಾನದಂತಹ ಪ್ರಮುಖ ವಿಷಯಗಳನ್ನು ಬಿಟ್ಟು ಗಂಜಲ ಹೊಲಸಿನ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು, ಆಗಸ್ಟ್ 05: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಲೇವಡಿ ವಿಚಾರ ಸಂಬಂಧ ಬಿಜೆಪಿಗರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೂಟ್‌ಕೇಸ್, ಬ್ರೀಫ್‌ಕೇಸ್, ಆಪರೇಷನ್ ಕಮಲ ಮಾಡಿದ್ಯಾರು? ಕಾಂಗ್ರೆಸ್, JDSನ 16 ಶಾಸಕರನ್ನು ಬಾಂಬೆಗೆ ಕರೆದೊಯ್ದಿದ್ಯಾರು? ಎಂದವರು ಪ್ರಶ್ನಿಸಿದ್ದಾರೆ. ಬಾಂಬೆ ಬಾಯ್ಸ್ ಗೋಣಿ ಚೀಲ ಹಿಡಿದುಕೊಂಡು ಹೋಗಿದ್ರಂತಾ? ರಾಜ್ಯ ಬಿಜೆಪಿ ಅಧ್ಯಕ್ಷ, ಆರ್.ಅಶೋಕ್ ಎಷ್ಟು ಕೋಟಿಗೆ ಬಾಳ್ತಾರೆ? ಸುಮ್ಮನೆ ನನ್ನನ್ನು ಇವರ ಚಾರ್ಟರ್ಡ್ ಅಕೌಂಟೆಂಟ್ ಮಾಡಬೇಡಿ. ಪ್ರತಿಪಕ್ಷ ಬಿಜೆಪಿ ನಾಯಕರು ಮಾತೆತ್ತಿದ್ದರೆ ಗಂಜಲ, ಹೊಲಸು. ವಿಪಕ್ಷ ನಾಯಕರಿಗೆ ಸಾಮಾಜಿಕ ನ್ಯಾಯ ಅಂದ್ರೆ ಏನೆಂದು ಗೊತ್ತಿಲ್ಲ ಎಂದವರು ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

