ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿಗರ ಟೀಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

Edited By:

Updated on: Aug 05, 2026 | 6:27 PM

ಸಚಿವ ಸಂಪುಟ ವಿಸ್ತರಣೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ಸೂಟ್‌ಕೇಸ್, ಬ್ರೀಫ್‌ಕೇಸ್, ಆಪರೇಷನ್ ಕಮಲ ಮತ್ತು ಬಾಂಬೆ ಬಾಯ್ಸ್ ಕುರಿತು ಪ್ರಶ್ನಿಸಿದ ಹರಿಪ್ರಸಾದ್, ಬಿಜೆಪಿಗೆ ಸಾಮಾಜಿಕ ನ್ಯಾಯದ ಪರಿಜ್ಞಾನವಿಲ್ಲ. ರಾಜ್ಯದ ಬರಗಾಲ ಮತ್ತು ಕೇಂದ್ರದ ಅನುದಾನದಂತಹ ಪ್ರಮುಖ ವಿಷಯಗಳನ್ನು ಬಿಟ್ಟು ಗಂಜಲ ಹೊಲಸಿನ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು, ಆಗಸ್ಟ್​​ 05: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಲೇವಡಿ ವಿಚಾರ ಸಂಬಂಧ ಬಿಜೆಪಿಗರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೂಟ್​ಕೇಸ್, ಬ್ರೀಫ್​ಕೇಸ್, ಆಪರೇಷನ್ ಕಮಲ ಮಾಡಿದ್ಯಾರು? ಕಾಂಗ್ರೆಸ್, JDSನ 16 ಶಾಸಕರನ್ನು ಬಾಂಬೆಗೆ ಕರೆದೊಯ್ದಿದ್ಯಾರು? ಎಂದವರು ಪ್ರಶ್ನಿಸಿದ್ದಾರೆ. ಬಾಂಬೆ ಬಾಯ್ಸ್ ಗೋಣಿ ಚೀಲ ಹಿಡಿದುಕೊಂಡು ಹೋಗಿದ್ರಂತಾ? ರಾಜ್ಯ ಬಿಜೆಪಿ ಅಧ್ಯಕ್ಷ, ಆರ್.ಅಶೋಕ್ ಎಷ್ಟು ಕೋಟಿಗೆ ಬಾಳ್ತಾರೆ? ಸುಮ್ಮನೆ ನನ್ನನ್ನು ಇವರ ಚಾರ್ಟರ್ಡ್ ಅಕೌಂಟೆಂಟ್​ ಮಾಡಬೇಡಿ. ಪ್ರತಿಪಕ್ಷ ಬಿಜೆಪಿ ನಾಯಕರು ಮಾತೆತ್ತಿದ್ದರೆ ಗಂಜಲ, ಹೊಲಸು. ವಿಪಕ್ಷ ನಾಯಕರಿಗೆ ಸಾಮಾಜಿಕ ನ್ಯಾಯ ಅಂದ್ರೆ ಏನೆಂದು ಗೊತ್ತಿಲ್ಲ ಎಂದವರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More