AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ ಹರಿಪ್ರಸಾದ್​​: ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಮಹತ್ವದ ಚರ್ಚೆ ಸಾಧ್ಯತೆ

ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ ಹರಿಪ್ರಸಾದ್​​: ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಮಹತ್ವದ ಚರ್ಚೆ ಸಾಧ್ಯತೆ

ಪ್ರಸನ್ನ ಗಾಂವ್ಕರ್​
| Edited By: |

Updated on: Nov 20, 2026 | 1:59 PM

Share

ಪಕ್ಷ ಸಂಘಟನೆ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಕುರಿತು ಹೈಕಮಾಂಡ್ ವರಿಷ್ಠರೊಂದಿಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ್ದು, ನಾಲ್ಕು ವಲಯಗಳ ಪ್ರಾತಿನಿಧ್ಯದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ರೇಸ್​ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​, ರಹೀಮ್ ಖಾನ್​, ಎಂ.ನಾರಾಯಣಸ್ವಾಮಿ, ಹೆಚ್.ಸಿ.ಮಹದೇವಪ್ಪ ಹೆಸರುಗಳು ಮುಂಚೂಣಿಯಲ್ಲಿವೆ.

ಬೆಂಗಳೂರು, ನವೆಂಬರ್​​ 20: ಹೈಕಮಾಂಡ್​​ ನಾಯಕರ ಜೊತೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​ ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. ವರಿಷ್ಠರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಅವರು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ರೇಸ್​ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​, ರಹೀಮ್ ಖಾನ್​, ಎಂ.ನಾರಾಯಣಸ್ವಾಮಿ, ಹೆಚ್.ಸಿ.ಮಹದೇವಪ್ಪ ಹೆಸರುಗಳು ಮುಂಚೂಣಿಯಲ್ಲಿವೆ. ನಾಲ್ಕು ವಲಯಕ್ಕೆ ಪ್ರಾತಿನಿಧ್ಯ ಕೊಡುವ ನಿಟ್ಟಿನಲ್ಲಿ ಈ ಬಗ್ಗೆ ಹೈಕಮಾಂಡ್ ನಾಯಕರ​ ಜೊತೆ ಹರಿಪ್ರಸಾದ್​​ ಚರ್ಚೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More