ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ ಹರಿಪ್ರಸಾದ್: ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಮಹತ್ವದ ಚರ್ಚೆ ಸಾಧ್ಯತೆ
ಪಕ್ಷ ಸಂಘಟನೆ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಕುರಿತು ಹೈಕಮಾಂಡ್ ವರಿಷ್ಠರೊಂದಿಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ್ದು, ನಾಲ್ಕು ವಲಯಗಳ ಪ್ರಾತಿನಿಧ್ಯದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ರೇಸ್ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ರಹೀಮ್ ಖಾನ್, ಎಂ.ನಾರಾಯಣಸ್ವಾಮಿ, ಹೆಚ್.ಸಿ.ಮಹದೇವಪ್ಪ ಹೆಸರುಗಳು ಮುಂಚೂಣಿಯಲ್ಲಿವೆ.
ಬೆಂಗಳೂರು, ನವೆಂಬರ್ 20: ಹೈಕಮಾಂಡ್ ನಾಯಕರ ಜೊತೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. ವರಿಷ್ಠರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಅವರು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ರೇಸ್ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ರಹೀಮ್ ಖಾನ್, ಎಂ.ನಾರಾಯಣಸ್ವಾಮಿ, ಹೆಚ್.ಸಿ.ಮಹದೇವಪ್ಪ ಹೆಸರುಗಳು ಮುಂಚೂಣಿಯಲ್ಲಿವೆ. ನಾಲ್ಕು ವಲಯಕ್ಕೆ ಪ್ರಾತಿನಿಧ್ಯ ಕೊಡುವ ನಿಟ್ಟಿನಲ್ಲಿ ಈ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಹರಿಪ್ರಸಾದ್ ಚರ್ಚೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
