ರಾಜೀನಾಮೆ ನೀಡಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ

Updated on: Nov 24, 2026 | 4:53 PM

ಹಾಸನ ಜಿಲ್ಲೆಯಿಂದ ಭದ್ರಾ ಅಭಯಾರಣ್ಯಕ್ಕೆ ಆನೆಗಳ ಸ್ಥಳಾಂತರಕ್ಕೆ ಚಿಕ್ಕಮಗಳೂರಿನಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಹೀಗಾಗಿ ಬೆನ್ನಲ್ಲೇ ಹಾಸನ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ನಾಯಕರ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮಧ್ಯೆ ಪ್ರವೇಶಿಸಿದ್ದು, ಶಾಸಕರ ರಾಜೀನಾಮೆ ತಡೆದಿದ್ದಾರೆ.

ಬೆಂಗಳೂರು, ನವೆಂಬರ್ 24: ಹಾಸನ ಜಿಲ್ಲೆಯಿಂದ ಭದ್ರಾ ಅಭಯಾರಣ್ಯಕ್ಕೆ ಆನೆಗಳ ಸ್ಥಳಾಂತರಕ್ಕೆ ಚಿಕ್ಕಮಗಳೂರಿನಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಹೀಗಾಗಿ ಬೆನ್ನಲ್ಲೇ ಹಾಸನ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ನಾಯಕರ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮಧ್ಯೆ ಪ್ರವೇಶಿಸಿದ್ದು, ಶಾಸಕರ ರಾಜೀನಾಮೆ ತಡೆದಿದ್ದಾರೆ. ಹೌದು… ರಾಜೀನಾಮೆಗೆ ಮುಂದಾಗಿದ್ದ ಚಿಕ್ಕಮಗಳೂರು ಕಾಂಗ್ರೆಸ್ ಶಾಸಕರನ್ನು ಕರೆಯಿಸಿ ಚರ್ಚಿಸಿ ರಾಜೀನಾಮೆ ನಿರ್ಧರದಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸೂಚನೆ ಮೇರೆಗೆ ನಯನಾ ಮೋಟಮ್ಮ ಸೇರಿದಂತೆ ಜಿಲ್ಲೆಯ ಶಾಸಕರು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಶಾಸಕರು ಸದ್ಯಕ್ಕೆ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸಿಎಂ ವಿದೇಶದಿಂದ ಬಂದ ಬಳಿಕ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ. ರಾಜೀನಾಮೆ ಕೊಡುವ ಮಟ್ಟಕ್ಕೆ ಚಿಕ್ಕಮಗಳೂರಿನ ಶಾಸಕರು ಹೋಗಲ್ಲ. ಆದರೆ ಶಾಸಕರ ಪರಿಸ್ಥಿತಿ ಗಂಭೀರವಾಗಿದೆ. ಅವರು ಹೇಳವುದರಲ್ಲಿ ಸತ್ಯವಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಗಾಗಲೇ ಕಾಡಾನೆ ದಾಳಿಗೆ 20-22 ಜನರು ಬಲಿಯಾಗಿದ್ದಾರೆ. ಹೀಗಾಗಿ ಸ್ಥಳೀಯರ ಅನಸಿಕೆಗಳನ್ನು ಶಾಸಕರು ಹೇಳಿದ್ದು, ಸಮಸ್ಯೆ ಬಗೆಹರಿಸ್ತೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More