ಡಿಕೆ ಶಿವಕುಮಾರ್ ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ!
ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ್ದು, ಈ ಶತದಕ ಸಂಭ್ರಮವನ್ನು ಡಿಕೆ ಶಿವಕುಮಾರ್ ಮೊನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟಿಸಿದ್ದು ವಿಶೇಷ. ಆದ್ರೆ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಅಸಮಧಾನ ಭುಗಿಲೆದ್ದಿದೆ. ಹೌದು...ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಅಸಮಾಧಾನಗೊಂಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 14): ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ್ದು, ಈ ಶತಕದ ಸಂಭ್ರಮವನ್ನು ಡಿಕೆ ಶಿವಕುಮಾರ್ ಮೊನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟಿಸಿದ್ದು ವಿಶೇಷ. ಆದ್ರೆ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಅಸಮಧಾನ ಭುಗಿಲೆದ್ದಿದೆ. ಹೌದು…ಸ್ವತಃ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಅಸಮಾಧಾನಗೊಂಡಿದ್ದಾರೆ. ಪಕ್ಷದ ಅಧ್ಯಕ್ಷರಿಗೆ ಆಹ್ವಾನ ಕೊಟ್ಟಿಲ್ಲ. ವಿಧಾನಪರಿಷತ್ ಸದಸ್ಯನಾಗಿದ್ದೇನೆ. ಆದರೂ ಒಂದು ಕರೆ ಮಾಡಿ ಆಹ್ವಾನ ಕೊಟ್ಟಿಲ್ಲ. ಶಿಷ್ಟಾಚಾರಕ್ಕಾದರೂ ಒಂದು ಸಣ್ಣ ಫೋಟೋ ಕೂಡ ಹಾಕಿಲ್ಲ ಎಂದು ಹರಿಪ್ರಸಾದ್ ಬೇಸರಗೊಂಡಿದ್ದು, ಇದನ್ನು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಸಾಲದಕ್ಕೆ ಎಐಸಿಸಿ ನಾಯಕರ ಬಳಿ ಅಳಲು ತೋಡಿಕೊಂಡಿದ್ದಾರೆ.

