Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ

ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ

ವಿವೇಕ ಬಿರಾದಾರ
|

Updated on: Feb 12, 2025 | 12:33 PM

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಿದ್ದನ್ನು ಉಲ್ಲೇಖಿಸಿ, ಮುಂದಿನ ಎಂಟು ದಿನಗಳಲ್ಲಿ ಇತರ ರಾಜ್ಯಗಳಲ್ಲೂ ಅಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದೆ.

ಬೆಂಗಳೂರು, ಫೆಬ್ರವರಿ 12: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ರಾಜ್ಯ ಕಾಂಗ್ರೆಸ್​ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್​ನಲ್ಲೇ ಸದ್ದಿಲ್ಲದೆ ಪೈಪೋಟಿ ಶುರುವಾಗಿದೆ. ಇದೀಗ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ (Mallikarjun Kharge) ನೀಡಿದ್ದಾರೆ. ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಬದಲಾವಣೆ. 8 ದಿನಗಳಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತೆ ಎಂದು ಹೇಳಿದರು.