Karnataka Assembly Polls: ಮತದಾನಕ್ಕೆ ಕೇವಲ ಎರಡು ವಾರ ಬಾಕಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ನವಚಂಡಿಕಾಯಾಗದಲ್ಲಿ ಡಿಕೆ ಶಿವಕುಮಾರ್ ಭಾಗಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 24, 2023 | 10:24 AM

ಮತದಾನಕ್ಕೆ ಕೇವಲ ಎರಡು ವಾರ ಮಾತ್ರ ಬಾಕಿಯಿರುವುದರಿಂದ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸುವುದರ ಜೊತೆಗೆ ಗುಡಿ ಗುಂಡಾರಗಳ ಸುತ್ತು ಹಾಕುತ್ತಿದ್ದಾರೆ.

ಉಡುಪಿ: ಜಿಲ್ಲೆಯ ಬೈಂದೂರು ಬಳಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ (Kollur Mookambika temple) ಇಂದು ಜರುಗುತ್ತಿರುವ ನವಚಂಡಿಕಾಯಾಗ ಪೂರ್ಣಾಹುತಿ ಪೂಜಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ತಮ್ಮ ಪತ್ನಿಯೊಂದಿಗೆ ಭಾಗಿಯಾಗಿದ್ದರು. ಮೂಕಾಂಬಿಕೆಯ ಸನ್ನಿಧಿ ದೇವಾಲಯದ ಪ್ರಾಂಗಣದಲ್ಲಿ ಶಿವಕುಮಾರ್ ಕೈಯಲ್ಲಿ ರುದ್ರಾಕ್ಷಿ ಮಣಿಹಾರ ಹಿಡಿದು ಧ್ಯಾಮಮಗ್ನರಾಗಿರುವುದನ್ನು ನೋಡಬಹುದು. ರಾಜ್ಯ ವಿಧಾನಸಭಾ ಚುನಾವಣೆ (assembly elections) ಮತದಾನಕ್ಕೆ ಕೇವಲ ಎರಡು ವಾರ ಮಾತ್ರ ಬಾಕಿಯಿರುವುದರಿಂದ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸುವುದರ ಜೊತೆಗೆ ಗುಡಿ ಗುಂಡಾರಗಳ ಸುತ್ತು ಹಾಕುತ್ತಿದ್ದಾರೆ. ಬೇರೆ ಸಮಯಕ್ಕಿಂತ ಚುನಾವಣಾ ಸಂದರ್ಭಗಳಲ್ಲಿ ನಮ್ಮ ರಾಜಕಾರಣಿಗಳು ದೇವದೇವತೆಗಳೆಡೆ ಹೆಚ್ಚು ಶ್ರದ್ಧೆ ಭಕ್ತಿಯನ್ನು ಪ್ರದರ್ಶಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.