AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಆಟೋ ಚಾಲಕರ ಜೊತೆ ಸಂವಾದ ನಡೆಸುವ ಮೊದಲು ಆಟೋರಿಕ್ಷಾ ಓಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

Bengaluru: ಆಟೋ ಚಾಲಕರ ಜೊತೆ ಸಂವಾದ ನಡೆಸುವ ಮೊದಲು ಆಟೋರಿಕ್ಷಾ ಓಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 24, 2023 | 11:51 AM

Share

ಅರಮನೆ ಮೈದಾನದಲ್ಲಿ ಅವರು ಆಟೋರಿಕ್ಷಾ ಚಾಲಕರ ಜೊತೆ ಸಂವಾದ ನಡೆಸುವ ಮೊದಲು ಮೈದಾನದ ಪ್ರವೇಶದ್ವಾರದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಆಟೋ ಓಡಿಸಿದರು.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಿರುವ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಆಟೋ ಓಡಿಸುವುದೂ ಗೊತ್ತು ಮಾರಾಯ್ರೇ. ಇಲ್ನೋಡಿ, ಅರಮನೆ ಮೈದಾನದಲ್ಲಿ (Palace Grounds) ಇಂದು ಅವರು ಆಟೋರಿಕ್ಷಾ ಚಾಲಕರ ಜೊತೆ ಸಂವಾದ ನಡೆಸುವ ಮೊದಲು ಮೈದಾನದ ಪ್ರವೇಶದ್ವಾರದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಆಟೋ ಓಡಿಸಿದರು. ಆಟ ಓಡಿಸುವಾಗ ಖಾಕಿ (Khaki) ಸಮವಸ್ತ್ರದ ಬದಲು ಖಾದಿ ಉಡುಪು ಧರಿಸಿದ್ದರು ಅಂತ ಬಿಜೆಪಿ ನಾಯಕರು ದೂರು ಸಲ್ಲಿಸುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.