Karnataka Assembly Polls: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮೊದಲು ತಾಯಿ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Edited By:

Updated on: May 11, 2023 | 5:12 PM

ಇನ್ನೆರಡು ದಿನಗಳಲ್ಲಿ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು ಡಿಕೆ ಸಹೋದರರು ತಾಯಿಯ ಆಶೀರ್ವಾದ ಪಡೆದರು.

ರಾಮನಗರ: ವಿಧಾನಸಭಾ ಚುನಾವಣೆ ನಿಮಿತ್ತ ಕಳೆದ ಎರಡು-ಮೂರು ತಿಂಗಳುಗಳಿಂದ ರಾಜ್ಯದೆಲ್ಲೆಡೆ ಸುತ್ತಾಡಿದ ಡಿಕೆ ಶಿವಕುಮಾರ್ (DK Shivakumar) ನಿನ್ನೆ ನಡೆದ ಮತದಾನ ಮತ್ತು ಮತಗಟ್ಟೆ ಸಮೀಕ್ಷೆಗಳ ವರದಿಗಳು ಹೊರಬಿದ್ದ ಬಳಿಕ ನಿರಾಳರಾಗಿದ್ದಾರೆ. ಗುರುವಾರ ಬೆಳಗ್ಗೆ ಅವರು ತಮ್ಮ ಸಹೋದರ ಡಿಕೆ ಸುರೇಶ್ (DK Suresh) ಜೊತೆ ಜಿಲ್ಲೆಯ ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ಅವರ ತಾಯಿ ಗೌರಮ್ಮರನ್ನು (Gowramma) ಭೇಟಿಯಾದರು. ಇನ್ನೆರಡು ದಿನಗಳಲ್ಲಿ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು ಡಿಕೆ ಸಹೋದರರು ತಾಯಿಯ ಆಶೀರ್ವಾದ ಪಡೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 11, 2023 12:40 PM