ಪಕ್ಷದ ಸಂಘಟನೆ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕಾರ್ಯಕ್ರಮದ ಉದ್ಘಾಟನೆ ನಂತರ ಮಾತಾಡಿದ ಶಿವಕುಮಾರ್ ಅವರ ಭಾಷಣದ ತಿರುಳು ಸಹ ಯುವಕರು ಮತ್ತು ಮಹಿಳೆಯರು ಆಗಿತ್ತು. ಕೆಪಿಸಿಸಿ ಅಧ್ಯಕ್ಷನಾದಾಗ ಯುವಕರು ಮತ್ತು ಮಹಿಳೆಯರ ಸಬಲೀಕರಣದ ಬಗ್ಗೆ ಮಾತಾಡಿದ್ದೆ, ಅದರಂತೆ ಯುವಕರಿಗೆ ಮತ್ತು ಮಹಿಳಿಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದ ಅವರು ಪಕ್ಷದ ಯುವ ಅಧ್ಯಕ್ಷ ಮತ್ತು ಎಲ್ಲ ಪದಾಧಿಕಾರಿಗಳಿಗೆ ಶಿಸ್ತು ಬಹಳ ಮುಖ್ಯ ಅಂತ ಹೇಳಿದರು.
ಬೆಂಗಳೂರು, 17ಮಾರ್ಚ್: ನಗರದ ಅರಮನೆ ಮೈದಾನದದಲ್ಲಿ ಇಂದು ಆಯೋಜಿಸಲಾಗಿದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೂತನ ಪದಾಧಿಕಾರಿಗಳಿಗೆ ಮತ್ತು ಮಹಿಳಾ ಕಾರ್ಯಕರ್ತೆಯರಿಗೆ ಆದ್ಯತೆ ನೀಡಿದರು. ಯುವ ನಾಯಕರು ಮತ್ತು ಮಹಿಳಾ ಕಾರ್ಯಕರ್ತೆಯ ಮೂಲಕ ಅವರು ದೀಪ ಬೆಳಗಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿರುವ ಶಿವಕುಮಾರ್ ಪಕ್ಷದ ಸಂಘಟನೆ ಕೆಲಸಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಮತ್ತು ಕಾರ್ಯಕ್ರಮಗಳಲ್ಲಿ ಹೆಚ್ಚು ಲವಲವಿಕೆಯಿಂದ ಓಡಾಡುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಅನಿವಾರ್ಯ ಕಾರಣಗಳಿಂದಾಗಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಿಳಾ ದಿನಾಚರಣೆ ಆಚರಿಸಲಾಗಿದೆ: ಶಿವಕುಮಾರ್