ಎರಡೂ ಕಾಯ್ದೆಗಳನ್ನು ನಾವು ವಾಪಸ್ ಪಡೆಯುವುದು ಖಚಿತ; ಬಿಜೆಪಿ, ಜೆಡಿಎಸ್‌ಗೆ ಬಹಿರಂಗ ಸವಾಲು ಹಾಕಿದ ಡಿ.ಕೆ.ಶಿವಕುಮಾರ್
ವಿಧಾನಸಭೆಯಲ್ಲಿ ನಮಗೆ ಅಗತ್ಯ ಸಂಖ್ಯಾಬಲವಿಲ್ಲ. ಆದರೆ ವಿಧಾನಪರಿಷತ್‌ನಲ್ಲಿ ನಮಗೆ ಬಹುಮತವಿದೆ. ಹೀಗಾಗಿ ವಿಧಾನಪರಿಷತ್‌ನಲ್ಲಿ ವಿಧೇಯಕ ಸೋಲಿಸಲು ಪ್ಲ್ಯಾನ್. ವಿಧಾನಸಭೆಯಲ್ಲಿ ನಮಗೆ ಹೇಳುವುದೊಂದು ಮಾಡವುದೊಂದು ಕೊನೆ ಹಂತದಲ್ಲಿ ಕೈ ಕೊಡುತ್ತಾರೆಂದು ಜೆಡಿಎಸ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿ: 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತೆ. ಈ ಮಾತು ನಾನು ಆನ್ ರೆಕಾರ್ಡ್ನಲ್ಲಿ ಹೇಳುತ್ತಿದ್ದೇನೆ ಎಂದು ಟಿವಿ9ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ನಮ್ಮ ಸರ್ಕಾರ ಬಂದ ಬಳಿಕ ಮತಾಂತರ ನಿಷೇಧ ಕಾಯ್ದೆ ರದ್ದು ಮಾಡ್ತೀವಿ. ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದೇ ಪಡೆಯುತ್ತೇವೆ. ಕಾಯ್ದೆ ವಾಪಸ್ ಬಗ್ಗೆ ಕೆಪಿಸಿಸಿ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ. ಎರಡೂ ಕಾಯ್ದೆಗಳನ್ನು ನಾವು ವಾಪಸ್ ಪಡೆಯುವುದು ಖಚಿತ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
ಸಂಖ್ಯಾ ಬಲ ಇದೆ ಎಂದು ಏನ್ ಬೇಕಾದ್ರು ಮಾಡಲು ಸಾಧ್ಯವಿಲ್ಲ. ಯಾರೇ ಆಗಲಿ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ವಿಧೇಯಕವನ್ನ ಮತಕ್ಕೆ ಹಾಕಲು ಪ್ಲ್ಯಾನ್ ಮಾಡುತ್ತಿದ್ದೇವೆ. ವಿಧಾನಸಭೆಯಲ್ಲಿ ನಮಗೆ ಅಗತ್ಯ ಸಂಖ್ಯಾಬಲವಿಲ್ಲ. ಆದರೆ ವಿಧಾನಪರಿಷತ್‌ನಲ್ಲಿ ನಮಗೆ ಬಹುಮತವಿದೆ. ಹೀಗಾಗಿ ವಿಧಾನಪರಿಷತ್‌ನಲ್ಲಿ ವಿಧೇಯಕ ಸೋಲಿಸಲು ಪ್ಲ್ಯಾನ್. ವಿಧಾನಸಭೆಯಲ್ಲಿ ನಮಗೆ ಹೇಳುವುದೊಂದು ಮಾಡವುದೊಂದು ಕೊನೆ ಹಂತದಲ್ಲಿ ಕೈ ಕೊಡುತ್ತಾರೆಂದು ಜೆಡಿಎಸ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಸಭಾತ್ಯಾಗ ಮಾಡುವುದು ಕೂಡ ಬಿಜೆಪಿಗೆ ಬೆಂಬಲ ಕೊಟ್ಟಂತೆ ಎಂದು ಟಿವಿ9ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ರು.