ಯೋಗೇಶ್ವರ್​ರನ್ನು ಮುಖ್ಯಮಂತ್ರಿ ಮನೆಗೆ ತಮ್ಮ ಕಾರಲ್ಲೇ ಕರೆದೊಯ್ದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 23, 2024 | 11:37 AM

ಇಂದು ಬೆಳ್ಳಂಬೆಳಗ್ಗೆಯೇ ಡಿಕೆ ಸುರೇಶ್ ತಮ್ಮ ಅಣ್ಣನ ಮನೆಗೆ ಬಂದಾಗ ಮಹತ್ವದ ಘಟನೆಯೊಂದು ನಡೆಯಲಿರುವ ಸೂಚನೆ ಮಾಧ್ಯಮದವರಿಗೆ ಸಿಕ್ಕಿತ್ತು. ನಿನ್ನೆ ಯೋಗೇಶ್ವರ್ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಹೆಚ್​ಡಿ ಕುಮಾರಸ್ವಾಮಿ ಬೇಸ್ತು ಬಿದ್ದಿರೊದು ಸತ್ಯ.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮೊದಲ ಸುತ್ತಿನ ಗೆಲುವು ದಕ್ಕಿದೆ. ನಿನ್ನೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಸಿಪಿ ಯೋಗೇಶ್ವರ್ ಇವತ್ತು ಬೆಳಗ್ಗೆಯೇ ಶಿವಕುಮಾರ್ ನಿವಾಸದ ಕದ ತಟ್ಟಿದರು! ನಂತರ ಶಿವಕುಮಾರ್ ಅವರು ಯೋಗೇಶ್ವರ್ ಅವರನ್ನು ತಮ್ಮ ಕಾರಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕರೆದೊಯ್ದರು. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರಿದರೆ ಟಿಕೆಟ್ ಅವರಿಗೆ ನಿಶ್ಚಿತ ಅಂತ ಬೇರೆ ಹೇಳಬೇಕೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯೋಗೇಶ್ವರ್​​​ಗಾಗಿ ಕಾದು ಕುಳಿತ ಕಾಂಗ್ರೆಸ್, ಒಂದು ವೇಳೆ ಕೈಕೊಟ್ಟರೆ ಪ್ಲಾನ್ ಬಿ ರೆಡಿ

Published on: Oct 23, 2024 10:44 AM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.