ಮತದಾರರ ಹೆಸರು ಡಿಲೀಟ್ ಮಾಡಲು ಪತ್ರ: ಬಿಜೆಪಿ ಎಂಎಲ್ಎ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಬಿಕೆ ಹರಿಪ್ರಸಾದ್
ಎಸ್ಐಆರ್ ಸಂಬಂಧ ಈಗಾಗಲೇ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಮತದಾರರ ಹೆಸರು ಡಿಲೀಟ್ ಮಾಡಲು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಇದೀಗ ಭಾರೀ ರಾಜ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದಾಖಲೆ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 24): ಎಸ್ಐಆರ್ ಸಂಬಂಧ ಈಗಾಗಲೇ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಮತದಾರರ ಹೆಸರು ಡಿಲೀಟ್ ಮಾಡಲು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಇದೀಗ ಭಾರೀ ರಾಜ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದಾಖಲೆ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿದ್ದಾರೆ.
2,500 ಮತದಾರರ ಹೆಸರು ಡಿಲೀಟ್ ಮಾಡಲು ಪತ್ರ ಬರೆದಿದ್ದಾರೆ. ಅವರೆಲ್ಲರೂ ಸಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರು.ಬಾಂಗ್ಲಾ, ಪಾಕಿಸ್ತಾನದವರು ಅಂತೇಳಿ ಡಿಲೀಟ್ ಮಾಡಿಸುತ್ತಿದ್ದಾರೆ. ಪ್ರತಿ ಬೂತ್ನಲ್ಲಿ 50 ಜನರ ಹೆಸರು ಡಿಲೀಟ್ ಮಾಡಲು ಹೇಳಿದ್ದಾರೆ. ಬೋಗಸ್ ಫಾರಂ ಏನಾದರೂ ಫೈಲ್ ಮಾಡಿದ್ರೆ, ಅವರು ಶಿಕ್ಷಾರ್ಹರು ಬಿಜೆಪಿ ಶಾಸಕ ಅಭಯ್ ಪಾಟೀಲ್ರನ್ನು ತಕ್ಷಣವೇ ಅರೆಸ್ಟ್ ಮಾಡಿ ಕಾನೂನಿನ ಕ್ರಮಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಅಭಯ್ ಪಾಟೀಲ್ ಪತ್ರ ನನ್ನ ಹತ್ತಿರ ಇದೆ. ಡಿಲೀಟ್ ಫಾರಂ ಫೈಲ್ ಮಾಡಿದ್ದು, ಸಿಗ್ನೇಚರ್ ಸಹ ಮಾಡಿದ್ದಾರೆ. ಸುಮಾರು 7000 ಮತದಾರರ ಹೆಸರು ಡಿಲೀಟ್ ಫಾರಂ ನೀಡಿದ್ದಾರೆ. ಎಲೆಕ್ಷನ್ ಕಮಿಷನ್ ಅಧಿಕಾರಿಗಳು ಸಹ ಇದರಲ್ಲಿ ಶಾಮಿಲಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ನಿಜ ಸ್ವರೂಪ ಹೊರಗೆ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.

