AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ! ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ‘ಸಾಹುಕಾರ’

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ! ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ‘ಸಾಹುಕಾರ’

ಪ್ರಸನ್ನ ಗಾಂವ್ಕರ್​
| Edited By: |

Updated on: May 26, 2026 | 8:15 AM

Share

ಕರ್ನಾಟಕದಲ್ಲಿ ಸಿಎಂ ಸ್ಥಾನ ಬದಲಾವಣೆ ವಿಚಾರದೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚರ್ಚೆ ಶುರುವಾಗಿದೆ. ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡುತ್ತಿದ್ದಾರೆ. ಪಕ್ಷದ ಮುಂದಿರುವ ಗೊಂದಲಗಳನ್ನು ಬಗೆಹರಿಸುವುದು ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಭವಿಷ್ಯ ನಿರ್ಧಾರವಾಗುವ ವಿಶ್ವಾಸವಿದೆ.

ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಯಲ್ಲಿರುವ ಬೆನ್ನಲ್ಲೇ ಜಾರಕಿಹೊಳಿ ಅವರ ಭೇಟಿ ಮಹತ್ವ ಪಡೆದಿದೆ.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮದೇ ಆದ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಇದೇ ವೇಳೆ, ಸಚಿವ ಪ್ರಿಯಾಂಕ್ ಖರ್ಗೆ ಕೂಡ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಇನ್ನೂ ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಜಾರಕಿಹೊಳಿ ಹೇಳಿದ್ದು, ಸಭೆಯಲ್ಲಿ ಅಜೆಂಡಾ ಆಧರಿಸಿ ನಿರ್ಧಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More