Loading video

ಜೆಡಿಎಸ್ ಮತ್ತು ಬಿಜೆಪಿ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳೋದು ಕೆಪಿಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಟ್ಟಿದ್ದು: ಜಿ ಪರಮೇಶ್ವರ್

Updated on: Feb 03, 2025 | 1:17 PM

ಬಿಜೆಪಿ ಆಂತರಿಕ ವಿಷಯಗಳ ಬಗ್ಗೆ ತಾನು ಕಾಮೆಂಟ್ ಮಾಡಲ್ಲ, ಆ ಪಕ್ಷದ ನಾಯಕರು ಅದನ್ನು ನೋಡಿಕೊಳ್ಳುತ್ತಾರೆ ಮತ್ತು ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷವು ವಾಚ್ ಡಾಗ್ ರೀತಿಯಲ್ಲಿ ಕೆಲಸ ಮಾಡಬೇಕು, ಬಿಜೆಪಿಗೆ ಆ ಸ್ಥಾನಮಾನ ಸಿಕ್ಕಿದೆ, ಅವರು ನೀಡುವ ಸಲಹೆ ಸೂಚನೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಜೆಡಿಎಸ್ ಪಕ್ಷದ ಕೆಲ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆಂದರೆ ಅವರು ಸುಮ್ಮನೆ ಹೇಳಿರಲ್ಲ ಅದಕ್ಕೊಂದು ಅರ್ಥವಿರುತ್ತದೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾತಾಡಿದ ಪರಮೇಶ್ವರ್, ಡಾ ಕೆ ಸುಧಾಕರ್, ಶಿವರಾಂ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ಮೊದಲಾದವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಪಕ್ಷದ ಅಧ್ಯಕ್ಷರ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೈಕಮಾಂಡ್ ಎಚ್ಚರಿಕೆಯನ್ನು ಉಲ್ಲಂಘಿಸಿದ ಯತೀಂದ್ರ ಬಗ್ಗೆ ಪರಮೇಶ್ವರ್ ನೋ ಕಾಮೆಂಟ್ಸ್​ ಎಂದರು!