ಸಿದ್ದರಾಮಯ್ಯ ಮತ್ತು ಶಿವಕುಮಾರ್ರನ್ನೂ ಟೀಕಿಸುವ ಯತ್ನಾಳ್ ಕಾಂಗ್ರೆಸ್ಗೆ ಬಂದಾರೆಯೇ? ಎಂ ಲಕ್ಷ್ಮಣ್
ತಮ್ಮ ವೈಯಕ್ತಿಕ ಅಭಿಪ್ರಾಯ ಕೇಳೋದಾದರೆ ಅವರು ಬಿಜೆಪಿಯಲ್ಲಿರೋದೇ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಪ್ರಯೋಜನಕಾರಿ, ಬಿಜೆಪಿಯಲ್ಲಿ ಉಳಿದು ಈಗ ಮಾಡುತ್ತಿರುವ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಮೈಸೂರಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಲಕ್ಷ್ಮಣ್ ಹೇಳಿದರು.
ಮೈಸೂರು: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟಿಸಿದರೆ ಮತ್ತು ಅವರು ಕಾಂಗ್ರೆಸ್ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದರೆ ಸ್ವಾಗತವಿದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೆಪಿಸಿಸಿ ವಕ್ತಾರ ವಿಡಂಬನಾತ್ಮಕವಾಗಿ ನಕ್ಕರು. ಎಐಸಿಸಿ ಅಧ್ಯಕ್ಷರೂ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರನ್ನು ವಾಚಾಮಗೋಚರವಾಗಿ ಬಯ್ಯುವ ಅವರು ಕಾಂಗ್ರೆಸ್ ಸೇರೋದು ಸಾಧ್ಯವೇ? ಸಿಎಂ ಸಿದ್ದರಾಮಯ್ಯ ಮತ್ತ್ತು ಡಿಸಿಎಂ ಡಿಕೆ ಶಿವಕುಮಾರ್ರನ್ನೇ ಅವರು ಬಿಟ್ಟಿಲ್ಲ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಅವರಿಗೆ ಒಗ್ಗಲ್ಲ ಎಂದು ಲಕ್ಷ್ಮಣ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಾಗಮಂಗಲ ಗಲಭೆ ಆರ್ಎಸ್ಎಸ್, ಬಿಜೆಪಿ, ಜೆಡಿಎಸ್ ಹುನ್ನಾರ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ