ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 16, 2024 | 2:42 PM

ತಮ್ಮ ವಿರುದ್ಧ ದೂರು ದಾಖಲಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ, ಭ್ರಷ್ಟಾಚಾರವೆಸಗಿ ಭಾಷಣಗಳ ಮೂಲಕ ಜನರನ್ನು ಪ್ರಚೋದಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗಡೀಪಾರು ಮಾಡಬೇಕು, ಕಾನೂನು ರೀತ್ಯಾ ಹೋರಾಟ ಮಾಡುತ್ತಿರುವ ತನ್ನನ್ನು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮರ ಘೋಷಿಸಿರುವ ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸುವ ಕೆಲಸವನ್ನು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮುಂದುವರಿಸಿದ್ದಾರೆ. ಕೃಷ್ಣ ವಿರುದ್ಧ ಈಗಾಗಲೇ ಹಲವು ದೂರು ದಾಖಲಿಸಿರುವ ಲಕ್ಷ್ಮಣ್ ಇವತ್ತು ಕೃಷ್ಣರಾಜ ವಿಭಾಗದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದರು. ಸ್ನೇಹಮಯಿ ಕೃಷ್ಣ ಒಬ್ಬ ರೌಡಿಶೀಟರ್ ಮತ್ತು ಅವರ ವಿರುದ್ಧ ಹಲವಾರು ದೂರು ದಾಖಲಾಗಿರುವುದರಿಂದ ಗಡೀಪಾರು ಮಾಡಬೇಕೆಂದು ದೂರಿನಲ್ಲಿ ಕೋರಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಾಗಮಂಗಲ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್ ಹುನ್ನಾರ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ