AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!

ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!

ಭಾವನಾ ಹೆಗಡೆ
|

Updated on:Jul 11, 2026 | 10:58 AM

Share

ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್ ಸಹುಕಾರ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಅಭ್ಯರ್ಥಿಗಳ ದಾಖಲೆ ಪರಿಶೀಲನೆ ವೇಳೆ ಸುಮಾ ಸಲ್ಲಿಸಿದ್ದ ದಾಖಲೆಗಳಲ್ಲಿನ ವಂಚನೆ ಬಯಲಾಗಿದೆ.

ಬೆಂಗಳೂರು, ಜುಲೈ 11: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್ ಸಹುಕಾರ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಅಭ್ಯರ್ಥಿಗಳ ದಾಖಲೆ ಪರಿಶೀಲನೆ ವೇಳೆ ಸುಮಾ ಸಲ್ಲಿಸಿದ್ದ ದಾಖಲೆಗಳಲ್ಲಿನ ವಂಚನೆ ಬಯಲಾಗಿದೆ.

ಸುಮಾ ಅವರು ತಮ್ಮ ಕುಟುಂಬದ ವಾರ್ಷಿಕ ಆದಾಯವನ್ನು 40,000 ರೂಪಾಯಿ ಎಂದು ನಮೂದಿಸಿದ್ದಾರೆ. ಆದರೆ, ಅವರ ತಂದೆ ಶಿವಶಂಕರಪ್ಪ ಅವರ ಮಾಸಿಕ ವೇತನವೇ 2,25,000 ರೂಪಾಯಿ ಆಗಿದ್ದು, ಇದು ವಾರ್ಷಿಕ 40,000 ರೂಪಾಯಿ ಆದಾಯಕ್ಕಿಂತ ಗಣನೀಯವಾಗಿ ಹೆಚ್ಚಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ ಮೀಸಲಾತಿ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 11, 2026 10:57 AM

Follow Us