AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​​ಸಿ ನೇಮಕಾತಿ ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಮಂಜೂರು

ಕೆಪಿಎಸ್​​ಸಿ ನೇಮಕಾತಿ ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಮಂಜೂರು

ರಮೇಶ್​ ಎಮ್​.
| Edited By: |

Updated on:Nov 11, 2026 | 5:30 PM

Share

ಮುಖ್ಯಾಂಶಗಳು

  • ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪ
  • ಶಿವಶಂಕರಪ್ಪ ಸಾಹುಕಾರ್, ಬಸವರಾಜ ಕನ್ನಾಳೆ ಜಾಮೀನು ಅರ್ಜಿ ವಜಾ
  • ಕೆಪಿಎಸ್‌ಸಿ ಸದಸ್ಯೆ ಬಿ.ವಿ.ಗೀತಾಗೆ ಜಾಮೀನು ಮಂಜೂರು

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆರೋಪಿಗಳಾದ ಶಿವಶಂಕರಪ್ಪ ಸಾಹುಕಾರ್ ಮತ್ತು ಬಸವರಾಜ್ ಕನ್ನಾಳೆ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 4ನೇ ಸಿಸಿಎಚ್ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ವಜಾಗೊಳಿಸಿದ್ದಾರೆ. ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಕೆಪಿಎಸ್‌ಸಿ ಸದಸ್ಯೆ ಗೀತಾ ಅವರ ಜಾಮೀನು ಮಾತ್ರ ಮಂಜೂರಾಗಿದೆ.

ಬೆಂಗಳೂರು, ನವೆಂಬರ್​​ 11: ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಸಾಹುಕಾರ್ ಮತ್ತು ಬಸವರಾಜ್ ಕನ್ನಾಳೆ ಜಾಮೀನು ಅರ್ಜಿಯನ್ನು ಬೆಂಗಳೂರಿನ 4ನೇ ಸಿಸಿಎಚ್ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ. ಇ.ಡಿ ಅಧಿಕಾರಿಗಳು ಶಿವಶಂಕರಪ್ಪ ಮತ್ತು ಬಸವರಾಜ ಕನ್ನಾಳೆಯನ್ನು ಬಂಧಿಸಿದ್ದರು. ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಕೆಪಿಎಸ್‌ಸಿ ಸದಸ್ಯೆ ಗೀತಾಗೆ ಇ.ಡಿ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 11, 2026 05:29 PM

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More