ಕೆಪಿಎಸ್​ಸಿ ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ

Edited By:

Updated on: Oct 21, 2026 | 6:44 AM

ಕೆಪಿಎಸ್​ಸಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮತ್ತು ಸದಸ್ಯೆ ಗೀತಾ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ತನಿಖೆಯನ್ನು ತೀವ್ರಗೊಳಿಸಿದ್ದು, ಶಿವಶಂಕರಪ್ಪ ಪುತ್ರಿ ಸುಮಾ ವಿರುದ್ಧ ವಾಣಿಜ್ಯ ಇಲಾಖೆ ನೇಮಕಾತಿಯಲ್ಲಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪದಡಿ ತನಿಖೆ ನಡೆಸುತ್ತಿದೆ.

ಬೆಂಗಳೂರು, ಅಕ್ಟೋಬರ್ 21: ಕೆಪಿಎಸ್​ಸಿ ನೇಮಕಾತಿ ಅಕ್ರಮದ ಕಳ್ಳಾಟ ಬಗೆದಷ್ಟು ಬಯಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಪಿಎಸ್​ಸಿಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಮಾಜಿ ಸದಸ್ಯೆ ಗೀತಾ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಸತತ ಎರಡು ವಾರಗಳ ಕಾಲ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ಇಬ್ಬರೂ ಕಂಬಿ ಹಿಂದೆ ಸೇರಿದ್ದಾರೆ. ಈ ನಡುವೆ, ಇಡಿ ಮತ್ತೊಂದು ನೇಮಕಾತಿ ಅಕ್ರಮದ ಬಗ್ಗೆ ತನಿಖೆ ಕೈಗೆತ್ತಿಕೊಂಡಿದೆ. ವಾಣಿಜ್ಯ ಇಲಾಖೆಯಲ್ಲಿನ 50 ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶಿವಶಂಕರಪ್ಪ ಪುತ್ರಿ ಸುಮಾ ಸಾಹುಕಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಿಮೆ ಆದಾಯ ಪ್ರಮಾಣಪತ್ರ ನೀಡಿರುವ ಆರೋಪ ಸುಮಾ ಮೇಲಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ 3ಬಿ ಮೀಸಲಾತಿ ಅಡಿಯಲ್ಲಿ ಸುಮಾ ಪರೀಕ್ಷೆಗೆ ಹಾಜರಾಗಿದ್ದರು. 2014ರಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, 2016ರಲ್ಲಿ ಅರ್ಹತಾ ಪಟ್ಟಿ ಬಿಡುಗಡೆಯಾಗಿತ್ತು. ಈ ವೇಳೆ ಸುಮಾ ತಮ್ಮ ವಾರ್ಷಿಕ ಆದಾಯ 40,000 ರೂಪಾಯಿ ಎಂದು ನಮೂದಿಸಿದ್ದರು. ಆದರೆ, ಅವರ ತಂದೆ ಶಿವಶಂಕರಪ್ಪ ಅವರ ಆದಾಯಕ್ಕೂ, ಪ್ರಮಾಣಪತ್ರದಲ್ಲಿನ ಆದಾಯಕ್ಕೂ ಭಾರಿ ವ್ಯತ್ಯಾಸವಿರುವುದು ಪತ್ತೆಯಾಗಿದೆ. ಸದ್ಯ ಇಡಿ ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More