‘ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು’: ಜ್ಞಾನೇಂದ್ರ ಹೊಸ ವರಸೆ!
ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಿಚಾರಣೆ ವೇಳೆ "ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದುಕೊಂಡಿರಬಹುದು" ಎಂದು ಹೇಳಿದ್ದಾರೆ. ಬಸವರಾಜ್ ಕನ್ನಾಳೆ ಮೂಲಕ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಅಭ್ಯರ್ಥಿಗಳು ರೆಸಾರ್ಟ್‌ಗಳಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಜ್ಞಾನೇಂದ್ರ ಕುಮಾರ್ ವಿಚಾರಣೆ ಮುಂದುವರಿದಿದೆ.
ಬೆಂಗಳೂರು, ಸೆಪ್ಟೆಂಬರ್ 02: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಿಚಾರಣೆ ವೇಳೆ ಮಹತ್ವದ ಹೇಳಿಕೆ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಕುರಿತು ವಿಚಾರಿಸಿದಾಗ, ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದುಕೊಂಡಿರಬಹುದು. ನಮ್ಮ ಮನೆಯಿಂದ ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗಿರಬಹುದು ಎಂದು ಹೇಳಿದ್ದಾರೆ.
ಜ್ಞಾನೇಂದ್ರ ಕುಮಾರ್ ಈ ಪ್ರಕರಣದಲ್ಲಿ ಪ್ರಮುಖ ಕೊಂಡಿ ಎಂದು ಸಿಐಡಿ ಅವರನ್ನು ಬಂಧಿಸಿತ್ತು. ಅವರು ಪರೀಕ್ಷಾ ನಿಯಂತ್ರಕರಾಗಿದ್ದರು. ಇವರಿಂದಲೇ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿದ್ದು, ಬಸವರಾಜ್ ಕನ್ನಾಳೆಗೆ ಕೊಟ್ಟು, ಕನ್ನಾಳೆ ಮೂಲಕ ಬೇರೆಯವರಿಗೆ ಮಾರಾಟವಾಗಿವೆ ಎಂಬ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರು, ತುಮಕೂರು, ಹೈದರಾಬಾದ್‌ನ ರೆಸಾರ್ಟ್‌ಗಳಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಕೊಟ್ಟು ಬರೆಸಲಾಗಿದೆ ಎಂದು ಕೆಲವು ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದಾರೆ. ಜ್ಞಾನೇಂದ್ರ ಕುಮಾರ್ ವಿಚಾರಣೆ ಇನ್ನೂ ಮುಂದುವರಿದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 02, 2026 12:47 PM
ಗುಲ್ಮಾರ್ಗ್ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ

