ಕೆಪಿಎಸ್​​​​​ಸಿ ಕರ್ಮಕಾಂಡ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್

Edited By:

Updated on: Aug 25, 2026 | 5:13 PM

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED), ಸದ್ಯ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಭಾನುವಾರ ದಾಳಿ ನಡೆಸಿದೆ. ಈ ಹಿಂದೆ ಕೆಪಿಎಸ್ ಸಿ ಮೇಲೂ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದ ಇಡಿ ಅಧಿಕಾರಿಗಳು ನಿನ್ನೆ (ಆಗಸ್ಟ್ 24) ಜಯಮಹಲ್ ರಸ್ತೆಯಲ್ಲಿರುವ ಗ್ಯಾನೇಂದ್ರ ಕುಮಾರ್ ಅವರ ಮನೆಯ ಬಾಗಿಲು ಒಡೆದು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು, ಗ್ಯಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಹೀಗಾಗಿ ಇಡಿ ದಾಳಿ ಮಾಡುವ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು, ಆಗಸ್ಟ್ 25): ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED), ಸದ್ಯ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಭಾನುವಾರ ದಾಳಿ ನಡೆಸಿದೆ. ಈ ಹಿಂದೆ ಕೆಪಿಎಸ್ ಸಿ ಮೇಲೂ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದ ಇಡಿ ಅಧಿಕಾರಿಗಳು ನಿನ್ನೆ (ಆಗಸ್ಟ್ 24) ಜಯಮಹಲ್ ರಸ್ತೆಯಲ್ಲಿರುವ ಗ್ಯಾನೇಂದ್ರ ಕುಮಾರ್ ಅವರ ಮನೆಯ ಬಾಗಿಲು ಒಡೆದು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು, ಗ್ಯಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಹೀಗಾಗಿ ಇಡಿ ದಾಳಿ ಮಾಡುವ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us