ಕೆಪಿಎಸ್ಸಿಯಲ್ಲಿ ಮತ್ತೊಂದು ಭಾರೀ ಅಕ್ರಮ: ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿಯಲ್ಲೂ ಅಕ್ರಮ, ಒಎಂಆರ್ ಶೀಟ್ ತಿದ್ದುಪಡಿ!
ಕೆಪಿಎಸ್ಸಿ ನೇಮಕಾತಿಯಲ್ಲಿ ಮತ್ತೊಂದು ಬೃಹತ್ ಅಕ್ರಮ ಬಯಲಾಗಿದೆ. 2023ರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹುದ್ದೆಗಳ ನೇಮಕಾತಿಯಲ್ಲಿ OMR ಶೀಟ್‌ಗಳನ್ನು ತಿದ್ದುಪಡಿ ಮಾಡಲಾಗಿದ್ದು, ಎಫ್‌ಎಸ್‌ಎಲ್ ವರದಿಯೂ ಇದನ್ನು ದೃಢಪಡಿಸಿದೆ. ಒಂದು ಹುದ್ದೆಗೆ ₹2 ರಿಂದ ₹5 ಕೋಟಿ ಡೀಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿಯಲ್ಲಿ ಮತ್ತೊಂದು ಬೃಹತ್ ಹಗರಣ ಬಯಲಿಗೆ ಬಂದಿದೆ. 2023ರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ (AWE) ಹುದ್ದೆಗಳ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಒಂದು ಎಡಬ್ಲ್ಯುಇ ಹುದ್ದೆಗೆ 2 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗಳ ಡೀಲ್ ನಡೆದಿರುವ ಬಗ್ಗೆ ‘ಟಿವಿ9’ಗೆ ಮಾಹಿತಿ ಲಭ್ಯವಾಗಿದೆ.
ಪರೀಕ್ಷೆಯ ಒಎಂಆರ್ ಶೀಟ್‌ಗಳನ್ನು ತಿದ್ದುಪಡಿ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಎಫ್‌ಎಸ್‌ಎಲ್ (Forensic Science Laboratory) ವರದಿಯು ತಿದ್ದುಪಡಿ ನಡೆದಿರುವುದನ್ನು ದೃಢಪಡಿಸಿದೆ. 24 ಅಭ್ಯರ್ಥಿಗಳ ಪೈಕಿ ಕನಿಷ್ಠ 10 ಮಂದಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಕುರಿತು ಕೆಪಿಎಸ್ಸಿ ಆಂತರಿಕ ವರದಿ ಸಲ್ಲಿಸಿದ್ದರೂ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಹಣ ಪಾವತಿಸಿ ಒಎಂಆರ್ ತಿದ್ದಿಸಿದ ಅಭ್ಯರ್ಥಿಗಳಿಗೆ ಪೋಸ್ಟಿಂಗ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಮೊದಲು, ಅಂದಿನ ಕೆಪಿಎಸ್ಸಿ ಕಾರ್ಯದರ್ಶಿ ಲತಾ ಕುಮಾರಿ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆದಿದ್ದು, ನಂತರ ವಿಜಯ್ ಕುಮಾರ್ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಯಿತು. ಈ ಸಮಿತಿಯು ಎಫ್‌ಎಸ್‌ಎಲ್‌ಗೆ ಕಳುಹಿಸಿದ ದಾಖಲೆಗಳ ಪರಿಶೀಲನೆಯಲ್ಲಿ ಅಕ್ರಮ ದೃಢಪಟ್ಟಿದೆ. ಸರ್ಕಾರ ಮತ್ತು ಕೆಪಿಎಸ್ಸಿ ಎರಡೂ ಈ ಅಕ್ರಮದಲ್ಲಿ ಶಾಮೀಲಾಗಿವೆ ಎಂಬ ಅನುಮಾನಗಳು ಮೂಡಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 11, 2026 10:47 AM
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

