ಕೆಪಿಎಸ್​ಸಿಯಲ್ಲಿ ಮತ್ತೊಂದು ಭಾರೀ ಅಕ್ರಮ: ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿಯಲ್ಲೂ ಅಕ್ರಮ, ಒಎಂಆರ್ ಶೀಟ್ ತಿದ್ದುಪಡಿ!

Edited By:

Updated on: Sep 11, 2026 | 10:47 AM

ಕೆಪಿಎಸ್ಸಿ ನೇಮಕಾತಿಯಲ್ಲಿ ಮತ್ತೊಂದು ಬೃಹತ್ ಅಕ್ರಮ ಬಯಲಾಗಿದೆ. 2023ರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹುದ್ದೆಗಳ ನೇಮಕಾತಿಯಲ್ಲಿ OMR ಶೀಟ್‌ಗಳನ್ನು ತಿದ್ದುಪಡಿ ಮಾಡಲಾಗಿದ್ದು, ಎಫ್‌ಎಸ್‌ಎಲ್ ವರದಿಯೂ ಇದನ್ನು ದೃಢಪಡಿಸಿದೆ. ಒಂದು ಹುದ್ದೆಗೆ ₹2 ರಿಂದ ₹5 ಕೋಟಿ ಡೀಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ನೇಮಕಾತಿಯಲ್ಲಿ ಮತ್ತೊಂದು ಬೃಹತ್ ಹಗರಣ ಬಯಲಿಗೆ ಬಂದಿದೆ. 2023ರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ (AWE) ಹುದ್ದೆಗಳ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಒಂದು ಎಡಬ್ಲ್ಯುಇ ಹುದ್ದೆಗೆ 2 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗಳ ಡೀಲ್ ನಡೆದಿರುವ ಬಗ್ಗೆ ‘ಟಿವಿ9’ಗೆ ಮಾಹಿತಿ ಲಭ್ಯವಾಗಿದೆ.

ಪರೀಕ್ಷೆಯ ಒಎಂಆರ್ ಶೀಟ್‌ಗಳನ್ನು ತಿದ್ದುಪಡಿ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಎಫ್‌ಎಸ್‌ಎಲ್ (Forensic Science Laboratory) ವರದಿಯು ತಿದ್ದುಪಡಿ ನಡೆದಿರುವುದನ್ನು ದೃಢಪಡಿಸಿದೆ. 24 ಅಭ್ಯರ್ಥಿಗಳ ಪೈಕಿ ಕನಿಷ್ಠ 10 ಮಂದಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಕುರಿತು ಕೆಪಿಎಸ್ಸಿ ಆಂತರಿಕ ವರದಿ ಸಲ್ಲಿಸಿದ್ದರೂ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಹಣ ಪಾವತಿಸಿ ಒಎಂಆರ್ ತಿದ್ದಿಸಿದ ಅಭ್ಯರ್ಥಿಗಳಿಗೆ ಪೋಸ್ಟಿಂಗ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮೊದಲು, ಅಂದಿನ ಕೆಪಿಎಸ್​ಸಿ ಕಾರ್ಯದರ್ಶಿ ಲತಾ ಕುಮಾರಿ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆದಿದ್ದು, ನಂತರ ವಿಜಯ್ ಕುಮಾರ್ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಯಿತು. ಈ ಸಮಿತಿಯು ಎಫ್‌ಎಸ್‌ಎಲ್‌ಗೆ ಕಳುಹಿಸಿದ ದಾಖಲೆಗಳ ಪರಿಶೀಲನೆಯಲ್ಲಿ ಅಕ್ರಮ ದೃಢಪಟ್ಟಿದೆ. ಸರ್ಕಾರ ಮತ್ತು ಕೆಪಿಎಸ್ಸಿ ಎರಡೂ ಈ ಅಕ್ರಮದಲ್ಲಿ ಶಾಮೀಲಾಗಿವೆ ಎಂಬ ಅನುಮಾನಗಳು ಮೂಡಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 11, 2026 10:47 AM
Loading...
Unable to load recommendations.
Follow Us