ಕೆಪಿಎಸ್​​ಸಿ ಹಗರಣ: ಆರೋಪಿ ಬಸವರಾಜ ಕನ್ನಾಳೆ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಈಶ್ವರ್ ಖಂಡ್ರೆ ವಿರುದ್ಧದ ಸ್ಪರ್ಧೆಗೆ ಮುಂದಾಗಿದ್ರಾ?

Edited By:

Updated on: Sep 04, 2026 | 5:32 PM

ಕೆಪಿಎಸ್​ಸಿ ಪಶು ವೈದ್ಯರ ನೇಮಕಾತಿಯಲ್ಲಿ ಹಗರಣ ಪ್ರಕರಣದ ಆರೋಪಿ ಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು. ನನ್ನ ವಿರುದ್ಧ ಬಿಜೆಪಿಯಿಂದ ಸ್ಪರ್ಧೆಗೆ ಬಸವರಾಜ ಕನ್ನಾಳೆ ಸಿದ್ಧತೆ ನಡೆಸಿದ್ದ. ಬಿಜೆಪಿಯವರ ಶಿಫಾರಸಿನಿಂದ ಸಿಂಡಿಕೇಟ್ ಸದಸ್ಯನಾಗಿದ್ದೇನೆ ಎಂದಿದ್ದ. ರಾಜ್ಯಪಾಲರು ಯಾವ ಮಾನದಂಡದಲ್ಲಿ ಆತನನ್ನು ನೇಮಿಸಿದರು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಬಸವರಾಜ ಕನ್ನಾಳೆ ನನ್ನ ಕಚೇರಿಗೆ ಬಂದು ಆಶೀರ್ವಾದ ಕೇಳಿದ್ದರು ಎಂದು ಆತನ ಜೊತೆಗಿನ ಫೋಟೋ ವೈರಲ್ ಬಗ್ಗೆ ಸ್ಪಷ್ಟಪಡಿಸಿದರು.

ಬೆಂಗಳೂರು, (ಸೆಪ್ಟೆಂಬರ್ 04): ಕೆಪಿಎಸ್​ಸಿ ಪಶು ವೈದ್ಯರ ನೇಮಕಾತಿಯಲ್ಲಿ ಹಗರಣ ಪ್ರಕರಣದ ಆರೋಪಿ ಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು. ನನ್ನ ವಿರುದ್ಧ ಬಿಜೆಪಿಯಿಂದ ಸ್ಪರ್ಧೆಗೆ ಬಸವರಾಜ ಕನ್ನಾಳೆ ಸಿದ್ಧತೆ ನಡೆಸಿದ್ದ. ಬಿಜೆಪಿಯವರ ಶಿಫಾರಸಿನಿಂದ ಸಿಂಡಿಕೇಟ್ ಸದಸ್ಯನಾಗಿದ್ದೇನೆ ಎಂದಿದ್ದ. ರಾಜ್ಯಪಾಲರು ಯಾವ ಮಾನದಂಡದಲ್ಲಿ ಆತನನ್ನು ನೇಮಿಸಿದರು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಬಸವರಾಜ ಕನ್ನಾಳೆ ನನ್ನ ಕಚೇರಿಗೆ ಬಂದು ಆಶೀರ್ವಾದ ಕೇಳಿದ್ದರು ಎಂದು ಆತನ ಜೊತೆಗಿನ ಫೋಟೋ ವೈರಲ್ ಬಗ್ಗೆ ಸ್ಪಷ್ಟಪಡಿಸಿದರು.

ಬಸವರಾಜ ಕನ್ನಾಳೆ ಜೊತೆ ಬಿಜೆಪಿ ನಾಯಕರ ಫೋಟೋಗಳೂ ಇವೆ. ಕನ್ನಾಳೆ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ. ಜೆಡಿಎಸ್, ಬಿಜೆಪಿ ತಮ್ಮ ಪಾಪವನ್ನು ಕಾಂಗ್ರೆಸ್ ಮೇಲೆ ಹೊರಿಸುತ್ತಿವೆ. ಕೆಪಿಎಸ್‌ಸಿ ಹಗರಣದ ಬಗ್ಗೆ ಎಲ್ಲ ಆಯಾಮಗಳ ತನಿಖೆ ನಡೆಯುತ್ತಿದೆ. ಕೆಪಿಎಸ್‌ಸಿ ಹಗರಣದ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲಿದೆ. ಹಾಲು ಯಾವುದು, ನೀರು ಯಾವುದು ತನಿಖೆಯಿಂದ ಬಹಿರಂಗವಾಗಲಿ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More