ನೇಮಕಾತಿ ಅಕ್ರಮ ಪ್ರಕರಣ: ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ

Edited By:

Updated on: Nov 19, 2026 | 11:49 AM

ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. 20 ಲಕ್ಷ ಲಂಚ ಪಡೆದ ಆರೋಪದ ಮೇಲೆ ಗೀತಾ ಅವರನ್ನು ಬಂಧಿಸಲಾಗಿದ್ದು, ಸರ್ಕಾರ ಅವರನ್ನು ಅಮಾನತುಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಿದ್ಧತೆ ನಡೆಸಿದೆ. ಈ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

ಬೆಂಗಳೂರು, ನವೆಂಬರ್​​ 19: ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ಮನೆ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ದಾಳಿ ನಡೆಸಿದೆ. ಗೀತಾ ಬಂಧನದ ಬೆನ್ನಲ್ಲೇ ಈ ದಾಳಿ ನಡೆದಿದ್ದು, ಅವರ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ಹಾಗೂ ಮಹಜರು ಕಾರ್ಯ ನಡೆಯುತ್ತಿದೆ. ಅಭ್ಯರ್ಥಿ ನಂದೀಶ್ ಅವರಿಂದ 20 ಲಕ್ಷ ರೂಪಾಯಿ ಪಡೆದ ಆರೋಪ ಗೀತಾ ಅವರ ಮೇಲಿದ್ದು, ರಾಜಮಹಲ್ ವಿಲಾಸ್ ಕ್ಲಬ್ ಬಳಿ ತಮ್ಮದೇ ಕಾರಿನಲ್ಲಿ ತೆರಳಿ ಹಣ ಪಡೆದಿದ್ದಾರೆ ಎಂದು ಹೇಳಲಾಗಿದೆ.ಈ ಹಿಂದೆ ಒಮ್ಮೆ ಬಂಧಿತರಾಗಿ ಜಾಮೀನು ಪಡೆದು ಹೊರಬಂದಿದ್ದ ಗೀತಾ ಅವರನ್ನು ಎಸ್‌ಐಟಿ ಮತ್ತೆ ಬಂಧಿಸಿತ್ತು. ಮತ್ತೊಂದೆಡೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳ ಹಿನ್ನೆಲೆ ಗೀತಾರನ್ನು ಕೆಪಿಎಸ್ಸಿ ಸದಸ್ಯ ಸ್ಥಾನದಿಂದ ಅಮಾನತುಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಿದ್ಧತೆ ನಡೆಯುತ್ತಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಕೆಪಿಎಸ್ಸಿ ಹಗರಣದಲ್ಲಿ ಗೀತಾ ಅವರ ಪಾತ್ರದ ಕುರಿತು ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More