AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಹಗರಣ: ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಸಂಗ್ರಹಿಸಿದ್ದ ಹಣದಲ್ಲಿ 1.30 ಕೋಟಿ ರೂ. ಜ್ಞಾನೇಂದ್ರಗೆ ನೀಡಿದ್ದ ಕನ್ನಾಳೆ

KPSC ಹಗರಣ: ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಸಂಗ್ರಹಿಸಿದ್ದ ಹಣದಲ್ಲಿ 1.30 ಕೋಟಿ ರೂ. ಜ್ಞಾನೇಂದ್ರಗೆ ನೀಡಿದ್ದ ಕನ್ನಾಳೆ

ಪ್ರದೀಪ್​ ಚಿಕ್ಕಾಟಿ
| Edited By: |

Updated on: Oct 04, 2026 | 6:53 AM

Share

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯಲ್ಲಿ ಮಹತ್ವದ ಮಾಹಿತಿ ಹೊರಬಿದ್ದಿದೆ. ಮಧ್ಯವರ್ತಿ ಬಸವರಾಜ್ ಕನ್ನಾಳೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ 1.5 ಕೋಟಿ ರೂ. ಸಂಗ್ರಹಿಸಿ, ಅದರಲ್ಲಿ 1.3 ಕೋಟಿ ರೂ. ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್‌ಗೆ ನೀಡಿದ್ದ. ಪರೀಕ್ಷೆಗೆ ಎರಡು ದಿನ ಮುಂಚಿತವಾಗಿ ಪೆನ್‌ಡ್ರೈವ್ ಮೂಲಕ ಪ್ರಶ್ನೆಪತ್ರಿಕೆ ಲೀಕ್ ಆಗಿತ್ತು ಎಂಬುದು ತಿಳಿದುಬಂದಿದೆ.

ಬೆಂಗಳೂರು, ಅಕ್ಟೋಬರ್​​ 04: KPSC ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ ತನಿಖೆ ವೇಳೆ ಮತ್ತಷ್ಟು ವಿಚಾರ ಬೆಳಕಿಗೆ ಬಂದಿದೆ. ಪ್ರಶ್ನೆಪತ್ರಿಕೆ ಸೋರಿಕೆಮಾಡಿ ಅಭ್ಯರ್ಥಿಗಳಿಂದ 1.50 ಕೋಟಿ ಹಣ ಸಂಗ್ರಹಿಸಿದ್ದ ಪ್ರಮುಖ ಆರೋಪಿ ಬಸವರಾಜ ಕನ್ನಾಳೆ, ಆ ಪೈಕಿ ಅಂದಿನ ಪರೀಕ್ಷಾ ನಿಯಂತ್ರಕರಾಗಿದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್​​ಗೆ 1.30 ಕೋಟಿ ಹಣವನ್ನ ನಗದು ರೂಪದಲ್ಲಿ ನೀಡಿದ್ದ. ಜನವರಿ 9ರಂದು ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ನಡೆದಿತ್ತಾದರೂ, ಜನವರಿ 7ರಂದೇ ಕನ್ನಾಳೆಗೆ ಪ್ರಶ್ನೆಪತ್ರಿಕೆ ಮತ್ತು ಉತ್ತರವನ್ನು ಜ್ಞಾನೇಂದ್ರ ನೀಡಿದ್ದರು ಎಂಬುದು ಇಡಿ ತನಿಖೆ ವೇಳೆ ಗೊತ್ತಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More