AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ಅಕ್ರಮ ಪ್ರಕರಣ: ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!

ಕೆಪಿಎಸ್​ಸಿ ಅಕ್ರಮ ಪ್ರಕರಣ: ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!

ಶಿವಪ್ರಸಾದ್​ ಬಿ.
| Edited By: |

Updated on:Aug 18, 2026 | 10:55 AM

Share

ಕೆಪಿಎಸ್​ಇ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಮತ್ತು ಗುಜರಾತ್‌ನ ಒಟ್ಟು 21 ಸ್ಥಳಗಳ ಮೇಲೆ ಮೆಗಾ ದಾಳಿ ನಡೆಸಿದ್ದಾರೆ. ಅಮಾನತುಗೊಂಡಿರುವ ಕೆಪಿಎಸ್​ಇ ಸದಸ್ಯ ಶಿವಶಂಕರಪ್ಪ ಸಾಹುಕಾರ್ ಮನೆ, KPSC ಕಚೇರಿ, ಸದಸ್ಯೆ ಶಾಂತಾ ಹೊಸಮನಿ ಹಾಗೂ 'M/s ಎಡುಟೆಸ್ಟ್ ಸೊಲ್ಯೂಷನ್ಸ್' ಸಂಸ್ಥೆ ಸೇರಿದಂತೆ ಮಧ್ಯವರ್ತಿಗಳು ಮತ್ತು ಆಯ್ಕೆಯಾದ ಅಭ್ಯರ್ಥಿಗಳ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು, ಆಗಸ್ಟ್ 18: ಕೆಪಿಎಸ್​ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಮತ್ತು ಗುಜರಾತ್‌ನ ಒಟ್ಟು 21 ಸ್ಥಳಗಳ ಮೇಲೆ ಮೆಗಾ ದಾಳಿ ನಡೆಸಿದ್ದಾರೆ.

ಅಮಾನತುಗೊಂಡಿರುವ ಕೆಪಿಎಸ್​ಸಿ ಸದಸ್ಯ ಶಿವಶಂಕರಪ್ಪ ಸಾಹುಕಾರ್ ಮನೆ, KPSC ಕಚೇರಿ, ಸದಸ್ಯೆ ಶಾಂತಾ ಹೊಸಮನಿ ಹಾಗೂ ‘M/s ಎಡುಟೆಸ್ಟ್ ಸೊಲ್ಯೂಷನ್ಸ್’ ಸಂಸ್ಥೆ ಸೇರಿದಂತೆ ಮಧ್ಯವರ್ತಿಗಳು ಮತ್ತು ಆಯ್ಕೆಯಾದ ಅಭ್ಯರ್ಥಿಗಳ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಯಿಂದ 70 ರಿಂದ 80 ಲಕ್ಷ ರೂ. ಲಂಚ ಪಡೆದಿರುವುದು, ಉತ್ತರ ಪತ್ರಿಕೆ ತಿದ್ದುಪಡಿ ಮತ್ತು ಕೆಪಿಎಸ್‌ಸಿ ಅಧಿಕಾರಿಗಳ ಸಂಬಂಧಿಕರಿಗೆ ಅಕ್ರಮವಾಗಿ ಹುದ್ದೆ ಕೊಡಿಸಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ವಿಧಾನಸೌಧ ಠಾಣೆಯಲ್ಲಿ 4 ಪ್ರತ್ಯೇಕ FIR ದಾಖಲಾಗಿದ್ದವು. ತಮ್ಮ ಪುತ್ರಿಯರ ಅಕ್ರಮ ನೇಮಕಾತಿಗೆ ನೆರವಾದ ಆರೋಪದ ಮೇಲೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜುಲೈ 13 ರಂದು ರಾಜ್ಯಪಾಲರು ಅಮಾನತುಗೊಳಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 18, 2026 10:53 AM

Follow Us