ಪಶು ವೈದ್ಯಾಧಿಕಾರಿ ಅಕ್ರಮ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪಶು ವೈದ್ಯಾಧಿಕಾರಿ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ, ಸಿಐಡಿ ಅಧಿಕಾರಿಗಳು ಎಸ್‌ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ಕೆಪಿಎಸ್‌ಸಿ ಕಚೇರಿ ಮೇಲೆ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ಚುರುಕುಗೊಂಡಿದೆ. ಮತ್ತೊಂದೆಡೆ, ಜಾರಿ ನಿರ್ದೇಶನಾಲಯ (ಇಡಿ) ಆರ್ಥಿಕ ಅಕ್ರಮಗಳ ಕುರಿತು ಪ್ರತ್ಯೇಕ ತನಿಖೆ ನಡೆಸುತ್ತಿದೆ.
ಬೆಂಗಳೂರು, ಆಗಸ್ಟ್ 25: ಪಶು ವೈದ್ಯಾಧಿಕಾರಿ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಚೇರಿ ಮೇಲೆ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ. ಎಸ್‌ಪಿ ರಾಘವೇಂದ್ರ ಹೆಗ್ಡೆ ಅವರ ನೇತೃತ್ವದಲ್ಲಿ ಸಿಐಡಿ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಸಿಐಡಿ ಒಂದು ಬಾರಿ ದಾಳಿ ನಡೆಸಿತ್ತು. ಅಂದು ಕೆಲವು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ವೇಳೆ ಹೊಸ ಸುಳಿವುಗಳು ದೊರೆತ ಕಾರಣ ಎರಡನೇ ದಾಳಿ ಮಾಡಲಾಗಿದೆ. ಮತ್ತೊಂದೆಡೆ ಇಂದೇ ವಿಚಾರಣೆಗೆ ಹಾಜರಾಗಲು ಸೂಚಿಸಿ 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್ ನೀಡಿದೆ. ಇಡಿ ಮುಂದೆ ಕೆಲವರು ತಪ್ಪೊಪ್ಪಿಗೆ ಮಾಹಿತಿ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
